ಬೊಮ್ಮನಕಟ್ಟೆ ಅನ್ನಪೂರ್ಣೇಶ್ವರಿ ದೇವಸ್ಥಾನದ ರಾಜಗೋಪುರ ಕಳಶಾರೋಹಣ

madhavamurthy
ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ಸೇವಾ ಸಮಿತಿ ಅಧ್ಯಕ್ಷ ಜಿ.ಕೆ.ಮಾಧವಮೂರ್ತಿ
Published on

ಶಿವಮೊಗ್ಗ: ಬೊಮ್ಮನಕಟ್ಟೆಯ ಶ್ರೀ ಅನ್ನಪೂರ್ಣೇಶ್ವರಿ ಸೇವಾ ಸಮಿತಿಯಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 12ನೇ ವರ್ಷದ ದಸರಾ ಉತ್ಸವ ಹಾಗೂ ನೂತನ ರಾಜಗೋಪುರ ಕಳಶಾರೋಹಣ ಸಮಾರಂಭ ಅ.12ರವರೆಗೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಜಿ.ಕೆ.ಮಾಧವಮೂರ್ತಿ ಹೇಳಿದರು.

ಕಳೆದ 12 ವರ್ಷಗಳಿಂದ ದಸರಾ ಸೇರಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅದರ ಅಂಗವಾಗಿ ಈ ಬಾರಿಯೂ ದಸರಾ ಉತ್ಸವ ಹಾಗೂ ದೇವಿಗೆ ವಿಶೇಷ ಅಲಂಕಾರ, ಪ್ರತಿ ದಿನ ಪೂಜೆ, ಹೋಮ, ಹವನ, ಭಜನೆ, ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅ.4ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ನೂತನ ರಾಜಗೋಪುರದ ಕಳಶಾರೋಹಣ ನಡೆಯಲಿದ್ದು ಹೊನ್ನಾಳಿ ಹಿರೇಕಲ್ಮಠದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಕೂಡಲಿ ಆರ್ಯ ಅಕ್ಷೋಭ್ಯತೀರ್ಥ ಮಹಾಸಂಸ್ಥಾನದ ಶ್ರೀ ರಘುವಿಜಯತೀರ್ಥಶ್ರೀಪಾದಂಗಳವರು, ಆದಿಚುಂಚನಗಿರಿ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ತಿಪಟೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.
ಖಜಾಂಚಿ ಬಿ.ಜಿ.ಧನರಾಜ್ ಮಾತನಾಡಿ, ಗುರುವಾರದಿಂದಲೇ ಅ.12ರವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರತಿದಿನವೂ ಮಧ್ಯಾಹ ಹಾಗೂ ರಾತ್ರಿ ಅನ್ನಸಂತರ್ಪಣೆ ಇರುತ್ತದೆ. ವಿಶೇಷವಾಗಿ ಅ.12 ರಂದು ಸಂಜೆ 6.30ಕ್ಕೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮ ಇರುತ್ತದೆ ಎಂದರು. ದೇವಸ್ಥಾನ ಸಮಿತಿ ಉಪಾಧ್ಯಕ್ಷ ಎನ್.ಎಚ್.ಪ್ರಭಾಕರ್, ಕಾರ್ಯದರ್ಶಿ ಎಂ.ಆರ್.ಬಸವರಾಜ್, ನಿರ್ದೇಶಕ ಎಂ.ಆರ್.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net