ಜನಸಂಖ್ಯೆ ಏರಿಕೆಯಿಂದ ವ್ಯತಿರಿಕ್ತ ಪರಿಣಾಮ; ನಾಗೇಂದ್ರಪ್ಪ

20-RNR-11
Published on

ರಾಣೆಬೆನ್ನೂರ: ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಆಹಾರ ವಸತಿ ಆರೋಗ್ಯ ಶಿಕ್ಷಣ ಉದ್ಯೋಗ ಮತ್ತು ಪರಿಸರದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ನಿವೃತ್ತ ಉಪನ್ಯಾಸಕ ನಾಗೇಂದ್ರಪ್ಪ ಮಾಚೇನಹಳ್ಳಿ ಹೇಳಿದರು.

ನಗರದ ಕೆಎಲ್​ಇ ಸಂಸ್ಥೆಯ ರಾಜ ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ನಿಮಿತ್ತ ಶನಿವಾರ ಏರ್ಪಡಿಸಿದ್ದ ಲಿಂಗ ಸಮಾನತೆ ಮತ್ತು ಸುಸ್ಥಿರ ಅಭಿವೃದ್ಧಿ ಎಂಬ ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯೆ ನಿಯಂತ್ರಣ ಇಂದಿನ ದಿನಮಾನದಲ್ಲಿ ಬಹಳ ಅವಶ್ಯವಿದೆ. ಸರ್ಕಾರ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕರಾದ ಅನುರಾಧ ಎಸ್​., ಶ್ರೀಕಾಂತ ಕುಂಚೂರ, ತೇಜು ಕುರವತ್ತಿ, ಪುಷ್ಪಾ ಹಾಲಬಾವಿ, ನಾಗರಾಜ ಗವಿಯಪ್ಪನವರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net