ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಜತೆ 'ಜೈಲರ್'​ ವೀಕ್ಷಿಸಲಿದ್ದಾರೆ ರಜನಿಕಾಂತ್​

Rajinikanth CM Yogi
Published on

ಲಖನೌ: ಸೂಪರ್​ಸ್ಟಾರ್​ ರಜನಿಕಾಂತ್​ ಅಭಿನಯದ ಜೈಲರ್ ಚಿತ್ರವು ಬಿಡುಗಡೆಯಾದ ದಿನದಿಂದಲ್ಲೂ ಒಂದಿಲ್ಲೊಂದು ವಿಶೇಷತೆಗಳಿಂದಾಗಿ ಸಿನಿ ರಸಿಕರ ಗಮನ ಸೆಳೆಯುತ್ತಿದೆ. ಬಾಕ್ಸ್​ಆಫೀಸ್​ನಲ್ಲಿ ಚಿತ್ರದ ಅಬ್ಬರ ಸದ್ಯಕ್ಕಂತು ನಿಲ್ಲುವ ಯಾವುದೇ ಮುನ್ಸೂಚನೆ ಕಂಡು ಬಂದಿಲ್ಲ. ಬಾಕ್ಸ್​ ಆಫೀಸ್​ ಪಂಡಿತರ ಪ್ರಕಾರ ಚಿತ್ರವು ಶನಿವಾರ 500 ಕೋಟಿ ರೂಪಾಯಿಯ ಗಡಿ ದಾಟಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ಚಿತ್ರ ಮತ್ತೊಂದು ವಿಚಾರಕ್ಕೆ ಸದ್ದು ಮಾಡುತ್ತಿದ್ದು, ಸೂಪರ್​ಸ್ಟಾರ್​ ರಜನಿಕಾಂತ್​ ಜೈಲರ್​ ಸಿನಿಮಾವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೊಂದಿಗೆ ವೀಕ್ಷಿಸಲಿದ್ದಾರೆ. ಈ ವಿಚಾರವನ್ನು ಖುದ್ದು ರಜನಿಕಾಂತ್​ ಅವರೇ ಖಚಿತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ರಜನಿಕಾಂತ್​ ದೇವರ ದೆಸೆಯಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಶನಿವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೊಂದಿಗೆ ಚಿತ್ರ ವೀಕ್ಷಿಸಲಿದ್ದೇನೆ ಎಂದು ಲಖನೌ ವಿಮಾನ ನಿಲ್ದಾಣದಲ್ಲಿ ತಿಳಿಸಿದ್ದಾರೆ.

ಚಿತ್ರ ಪ್ರದರ್ಶನಕ್ಕೂ ಮುನ್ನ ರಜಿನಿಕಾಂತ್​ ಉತ್ತರಪ್ರದೇಶ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯಪಾಲರ ಜೊತೆಗಿನ ಭೇಟಿಯ ಚಿತ್ರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net