‘ತಲೈವರ್​ 170’ ಚಿತ್ರದ ರಜನಿಕಾಂತ್​ ಫಸ್ಟ್​ ಲುಕ್​ ಬಿಡುಗಡೆ

Rajanikanth
ತಲೈವಾರ್​ 170
Published on

‘ತಲೈವರ್​ 170’ ಸಿನಿಮಾದ ಪ್ರಥಮ ಲುಕ್​ ಬಹಿರಂಗವಾಗಿದೆ. ಬ್ಲಾಕ್​ ಆ್ಯಂಡ್​ ವೈಟ್​ ಥೀಮ್​ನಲ್ಲಿ ಈ ಪೋಸ್ಟರ್​ ವಿನ್ಯಾಸಗೊಂಡಿದೆ.

ರಜನಿ ಅಭಿನಯದ 170ನೇ ಸಿನಿಮಾ ಇದಾಗಿದ್ದು, ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಚಿತ್ರ ನಿರ್ಮಿಸುತ್ತಿರುವ ಲೈಕಾ ಪ್ರೊಡಕ್ಷನ್ಸ್​ ತನ್ನ ಅಧಿಕೃತ ಎಕ್ಸ್​(x) ಪೇಜ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದನ್ನು ಕಂಡು ಅಭಿಮಾನಿಗಳು ಸಂತಸಪಟ್ಟಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರವನ್ನು ಸದ್ಯಕ್ಕೆ ‘ತಲೈವರ್​ 170’ (Thalaivar 170) ಎಂದು ಕರೆಯಲಾಗುತ್ತಿದೆ. ಅಮಿತಾಭ್​ ಬಚ್ಚನ್​ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬುದು ವಿಶೇಷ.

ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆ ಮೂಲಕ ‘ತಲೈವರ್​ 170’ ಸಿನಿಮಾ ಮೂಡಿಬರುತ್ತಿದೆ. ‘ಜೈ ಭೀಮ್​’ ಸಿನಿಮಾ ಖ್ಯಾತಿಯ ಟಿಜೆ ಜ್ಞಾನವೇಲ್​ ನಿರ್ದೇಶನ ಮಾಡುತ್ತಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಗಮನ ಸೆಳೆಯುತ್ತಿದೆ. ರಜನಿಕಾಂತ್​ ಮತ್ತು ಅಮಿತಾಭ್​ ಬಚ್ಚನ್​ ಮಾತ್ರವಲ್ಲದೇ ರಾಣಾ ದಗ್ಗುಬಾಟಿ, ಫಹಾದ್ ಪಾಸಿಲ್​, ಮಂಜು ವಾರಿಯರ್​ ಮುಂತಾದವರು ನಟಿಸುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಈಗ ಎಲ್ಲ ಕಲಾವಿದರ ಪೋಸ್ಟರ್​ಗಳು ಫಸ್ಟ್​ ಲುಕ್​ನಲ್ಲಿ ರಾರಾಜಿಸುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net