ರಾಜ್‌ಕೋಟ್ ಏರ್‌ಪೋರ್ಟ್​ ಟರ್ಮಿನಲ್‌ನಲ್ಲಿ ಶೆಲ್ಟರ್ ಕುಸಿತ!

airport
Published on

ಗಾಂಧಿನಗರ: ಭಾರಿ ಮಳೆಯಿಂದಾಗಿ ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊರಗಿನ ಶೆಲ್ಟರ್ ಶನಿವಾರ ಕುಸಿದಿದೆ.

ಪ್ರಯಾಣಿಕರನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆದರೆ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ಸಂಬಂಧ ವಿಡಿಯೋ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಭಾರಿ ಮಳೆಯಿಂದಾಗಿ ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್-1 ಕುಸಿದು ಈ ಅವಘಡದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಾಸುವ ಮುನ್ನವೇ ಈ ಅವಘಡ ಸಂಭವಿಸಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ದಕ್ಷಿಣ ಗುಜರಾತ್‌ನಲ್ಲಿ ಚಂಡಮಾರುತದ ತೀವ್ರತೆ ಇದೆ ಎಂದು ಭಾರತೀಯ ಹವಾಮಾನ ಕೇಂದ್ರ ಶನಿವಾರ ಹಳದಿ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net