

ಬೆಂಗಳೂರು: ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ರಾಜ್ಯಸಭೆ ಸ್ಥಾನಕ್ಕೆ ಬಿಜೆಪಿಯ ಡಾ. ಕೆ.ನಾರಾಯಣ್ ಅವಿರೋಧ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ಕರೊನಾ ಸೋಂಕಿನಿಂದ ಇತ್ತೀಚಿಗೆ ಮೃತಪಟ್ಟಿದ್ದರು. ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿಸೆಂಬರ್ 1ರಂದು ಮತದಾನದ ದಿನಾಂಕವನ್ನೂ ಘೋಷಣೆ ಮಾಡಲಾಗಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಉದ್ಯಮಿ ನಾರಾಯಣ್ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂಪಡೆಯುವ ಅವಧಿ ಪೂರ್ಣಗೊಂಡ ಬಳಿಕ ಚುನಾವಣಾಧಿಕಾರಿಗಳ ಕಚೇರಿಗೆ ಕುಟುಂಬ ಸಮೇತ ಆಗಮಿಸಿದ ನಾರಾಯಣ್, ವಿಧಾನಸಭೆ ಕಾರ್ಯದರ್ಶಿಗಳಿಂದ ಆಯ್ಕೆಯ ಪ್ರಮಾಣಪತ್ರ ಸ್ವೀಕರಿಸಿದರು.