ಎಎಪಿ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಸಂಜಯ್ ಸಿಂಗ್ ನೇಮಕ!

sing
Published on

ನವದೆಹಲಿ: ಆಮ್ ಆದ್ಮಿ ಪಕ್ಷವು ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಎಎಪಿ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಲ್ಲದೆ ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಅವರನ್ನೇ ಆಯ್ಕೆ ಮಾಡಲಾಗಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವುದರಿಂದ ಸಂಜಯ್ ಸಿಂಗ್ ಅವರಿಗೆ ಪಕ್ಷದ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ.

" ರಸ್ತೆಯಿಂದ ಹಿಡಿದು ಸಂಸತ್ತಿನವರೆಗೆ ಧ್ವನಿ ಎತ್ತಲು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಅವರು ನನಗೆ ಯಾವಾಗಲೂ ಅವಕಾಶವನ್ನು ನೀಡಿದ್ದಾರೆ. ಸಂಸದೀಯ ಪಕ್ಷದ ಮುಖ್ಯಸ್ಥನಾಗಿ ಸಮರ್ಪಣಾ ಭಾವದಿಂದ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಸಂಸದ ಸಂಜಯ್ ಅವರು ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆಯಲ್ಲಿ 10 ಸಂಸದರನ್ನು ಹೊಂದಿರುವ ಎಎಪಿ ನಾಲ್ಕನೇ ಅತಿದೊಡ್ಡ ಪಕ್ಷವಾಗಿದೆ. ಲೋಕಸಭೆಯಲ್ಲಿ ಮೂವರು ಸಂಸದರನ್ನು ಹೊಂದಿದೆ ಎಂದು ಪಕ್ಷ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net