

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು (ಜೂನ್ 06) 41ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿರುವ ರಕ್ಷಿತ್ ತಮ್ಮ ಮುಂದಿನ ಪ್ರಾಜೆಕ್ಟ್ಗಳ ಕುರಿತು ಅಪ್ಡೇಟ್ ನೀಡಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಸಿನಿಮಾ ಮಾತ್ರವಲ್ಲದೇ ವೆಬ್ ಸೀರೀಸ್ನಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಕ್ಷಿತ್ ತಮ್ಮ ನಟನೆಯ ಏಕೆಂ ವೆಬ್ ಸೀರೀಸ್ನ ದೃಶ್ಯವನ್ನು ಹಂಚಿಕೊಂಡಿದ್ದಾರೆ. ಏಕಂ ಬಗ್ಗೆ ಅಪ್‌ಡೇಟ್ ತರುತ್ತಿದ್ದೇವೆ. ಈ ಸ್ಥಳವನ್ನು ತುಂಬಾ ಹತ್ತಿರದಿಂದ ನೋಡಿ. ಮಚ್ ಲವ್ ಎಂದು ನಟ ಬರೆದುಕೊಂಡಿದ್ದಾರೆ. ಜೂನ್ 17ರಂದು ಅಧಿಕೃತ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ರಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣ ಸಂಸ್ಥೆ ಹಾಗೂ ಪರಮ್ವಾ ಸ್ಟುಡಿಯೋಸ್ ಮೂಲಕ ಒಟಿಟಿಗೆ 8 ಎಪಿಸೋಡ್‌ಗಳ ‘ಏಕಂ’ ವೆಬ್ ಸಿರೀಸ್ ನಿರ್ಮಾಣ ಮಾಡಿದ್ದಾರೆ. ಅವರೇ ನಿರ್ದೇಶನ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ. ‘ರಿಚರ್ಡ್ ಆ್ಯಂಟನಿ’ ಸಿನಿಮಾ ಸೇರಿದಂತೆ ರಕ್ಷಿತ್ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ನೆಚ್ಚಿನ ನಟ ಜನುಮದಿನದಂದೇ ಹೊಸ ಅಪ್ಡೇಟ್ ನೀಡುತ್ತಿದ್ದಂತೆ ಏಕಂ ವೆಬ್ಸೀರೀಸ್ ಕುರಿತು ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟುಗೊಳಿಸಿದೆ.