ಮತದಾನ ಮಾಡಿದ ಪ್ರೇಮ್-ರಕ್ಷಿತಾ; ದುಡ್ಡು ಪಡೆದು ಹಕ್ಕು ಚಲಾಯಿಸಬೇಡಿ ಎಂದ ದಂಪತಿ

Prem
Published on

ಬೆಂಗಳೂರು: ನಟ, ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ದಂಪತಿ ಒಟ್ಟಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

ಮತದಾನದ ಬಳಿಕ ಮಾತನಾಡಿದ ನಿರ್ದೇಶಕ ಪ್ರೇಮ್, ದುಡ್ಡು ಪಡೆದುಕೊಂಡು ಯಾರೂ ಮತ ಹಾಕಬೇಡಿ. ಒಬ್ಬೊಬ್ಬರು ಮನೆ ಹತ್ತಿರ ವೋಟ್ ಹಾಕಿ ಎಂದು ಬರುತ್ತಾರೆ. ಇನ್ನು ಕೆಲವರು ಬಂದು ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಮತ ಹಾಕಿ ಎನ್ನುತ್ತಾರೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹಕ್ಕನ್ನು ಮಾರಿಕೊಳ್ಳಬೇಡಿ. ಒಳ್ಳೆಯ ವ್ಯಕ್ತಿ, ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದರು.

ಮತದಾನ ಪ್ರತಿಯೊಬ್ಬರ ಅಧಿಕಾರ ಆಗಿದ್ದು, ಪ್ರತಿಯೊಬ್ಬ ನಾಗರೀಕರೂ ಅವಕಾಶ ಬಳಸಿಕೊಳ್ಳಬೇಕು. ಯಾರು ಚೆನ್ನಾಗಿ ಕೆಲಸ ಮಾಡುತ್ತಾರೆ, ಒಳ್ಳೆಯ ಅಭಿವೃದ್ಧಿ ಮಾಡುವವರಿಗೆ ಮತ ನೀಡಿ ಎಂದು ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net