ರಾಷ್ಟ್ರೀಯ ಡೆಂೆ ನಿರ್ಮೂಲನೆ ದಿನದ ಪ್ರಯುಕ್ತ ಜಾಥಾ

16ss1jaata
ರಾಷ್ಟ್ರೀಯ ಡೆಂೆ ನಿರ್ಮೂಲನೆ ದಿನದ ಪ್ರಯುಕ್ತ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಸ್ಪತ್ರೆ ವೈದ್ಯಾಧಿಕಾರಿ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಗ್ರಾಮಗಳಿಗೆ ತೆರಳಿ ಜಾಥಾ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.
Published on

ಶನಿವಾರಸಂತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಡೆಂೆ ನಿರ್ಮೂಲನೆ ದಿನವನ್ನು ಆಚರಿಸಲಾಯಿತು.

ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಧನಿಕಾ ಮಾತನಾಡಿ, ಮನೆ ಸುತ್ತಮುತ್ತ, ಚರಂಡಿಯಲ್ಲಿ ನೀರು ನಿಂತುಕೊಳ್ಳದಂತೆ ನೋಡಿಕೊಳ್ಳುವುದರ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳುವುದು, ಡೆಂೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರಿಂದ ಡೆಂೆ ಕಾಯಿಲೆಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದರು.

ಸೊಳ್ಳೆಗಳಿಂದ ಡೆಂೆ, ಮಲೆರಿಯಾ ಬರಲಿದೆ. ನಿಂತ ನೀರಿನಲ್ಲಿ ಸೊಳ್ಳೆ ಮೊಟ್ಟೆ ಇಡುವುದರಿಂದ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನಲ್ಲಿ, ಚರಂಡಿಯಲ್ಲಿ ಕಲುಷಿತ ನೀರು ನಿಂತುಕೊಳ್ಳದಂತೆ ಬಿಡಬಾರದು. ಈ ಮೂಲಕ ಸೊಳ್ಳೆಗಳು ಹರಡದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಕಾರ್ಯಕ್ರಮದ ಸಂಯೋಜಕಿ ಟಿ.ಕೆ.ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಡೆಂೆ ದಿನದ ಪ್ರಯುಕ್ತ ಆಸ್ಪತ್ರೆ ಸಿಬ್ಬಂದಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಆಸ್ಪತ್ರೆಯಿಂದ ಕೊಡ್ಲಿಪೇಟೆ ಸಾರ್ವಜನಿಕ ಬಸ್ ನಿಲ್ದಾಣ, ಕೆರಗನಹಳ್ಳಿ, ನಂದಿಪುರ ಗ್ರಾಮದವರೆಗೆ ಜಾಥಾ ನಡೆಸುವು ಮೂಲಕ ಸಾರ್ವಜನಿಕರಲ್ಲಿ ಡೆಂೆ ಬಗ್ಗೆ ಅರಿವು ಮೂಡಿಸಿದರು. ಆಶಾ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿ ಗ್ರಾಮಸ್ಥರ ಮನೆಗಳಿಗೆ ತೆರಳಿ ಡೆಂೆ ಬಗ್ಗೆ ಮಾಹಿತಿ ನೀಡಿದರು.

ಜಾಥಾದಲ್ಲಿ ಸಿಎಚ್‌ಒ ಆಶಾ, ನಂದೀಶ್, ಅನಿತಾ, ಧರಣೇಶ್, ಕೇಶವಮೂರ್ತಿ, ಅಖಿಲಾ ರಾಜ್, ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net