

ಆಂಧ್ರಪ್ರದೇಶ: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ ಮುಗಿಸಿದ 37 ವರ್ಷಗಳ ಬಳಿಕ ತಮ್ಮ ಇಂಜಿನಿಯರಿಂಗ್ ಪದವಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಆರ್‌ಜಿವಿ ಟ್ವೀಟ್ ಮಾಡಿದ್ದು, ತಮ್ಮ ಪ್ರಮಾಣ ಪತ್ರ ಫೋಟೋ ಹಂಚಿಕೊಂಡಿದ್ದಾರೆ.
ದೀರ್ಘ ಕಾಲದ ನಂತರ ಇಂಜಿನಿಯರಿಂಗ್ ಪ್ರಮಾಣಪತ್ರವನ್ನು ಪಡೆದುಕೊಳ್ಳಲು ಉತ್ಸುಕನಾಗಿದ್ದೇನೆ. 1985ರಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ಮಾಡಲು ಆಸಕ್ತಿ ಇರಲಿಲ್ಲ. ಹೀಗಾಗಿ ಪ್ರಮಾಣ ಪತ್ರವನ್ನು ಪಡೆದುಕೊಂಡಿರಲಿಲ್ಲ. ಇದೀಗ 37 ವರ್ಷಗಳ ನಂತರ ಪ್ರಮಾಣ ಪತ್ರ ನೀಡುತ್ತಿರುವುದಕ್ಕೆ ವಿಶ್ವವಿದ್ಯಾಲಯಕ್ಕೆ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.
ರಾಮ್ ಗೋಪಾಲ್ ವರ್ಮಾ 1985ರಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ದ್ವಿತೀಯ ದರ್ಜೆಯಲ್ಲಿ ಪೂರ್ಣಗೊಳಿಸಿದ್ದಾರೆ. ಈ ಬಗ್ಗೆ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದ ಶಿಕ್ಷಕರೊಂದಿಗೆ ಫೋಟೋ ಹಂಚಿಕೊಂಡು, ಅಶಿಕ್ಷಿತನಾಗಿದ್ದ ನನ್ನು ಶಿಕ್ಷಿತನನ್ನಾಗಿ ಮಾಡಿದ್ದಾರೆ. ಕಾಲೇಜಿನಲ್ಲಿ ನಡೆಯುತ್ತಿರುವ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೇಳಿದ್ದಾರೆ. ನಾನು ಈ ಗೌರವಕ್ಕೆ ಅರ್ಹನಲ್ಲ ಎಂದು ಉಪಕುಲಪತಿ ಪ್ರೊ. ರಾಜಶೇಖರ್ ಅವರಿಗೆ ಹೇಳಿದ್ದೇನೆ. ಆದರೆ ಅವರು ನನ್ನತ್ತು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)