

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆವರೆಗೆ ಹೊಣೆಗಾರಿಕೆ ನಿರ್ವಹಿಸಿದ್ದ ರಾಮಮಾಧವ್ ಅವರನ್ನು ಬಿಜೆಪಿಯಿಂದ ಪುನಃ ಆರ್ಎಸ್ಎಸ್ಗೆ ನಿಯುಕ್ತಿ ಮಾಡಲಾಗಿದೆ. ಆರ್ಎಸ್ಎಸ್ನ ಪ್ರಚಾರಕರಾಗಿರುವ ರಾಮಮಾಧವ್ ಅವರನ್ನು 2014ರಲ್ಲಿ ಬಿಜೆಪಿಗೆ ನಿಯುಕ್ತಿ ಮಾಡಲಾಗಿತ್ತು.
ಜಮ್ಮು-ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಬೆಂಬಲಿತ ಸರ್ಕಾರಗಳ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಕೆಲವು ತಿಂಗಳ ಹಿಂದೆ ಅವರನ್ನು ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆರವುಗೊಳಿಸಲಾಗಿತ್ತು.
ಇದೀಗ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನಿಯುಕ್ತಿ ಮಾಡಲಾಗಿದೆ. ಆರ್ಎಸ್ಎಸ್ನ ವೈಚಾರಿಕ ವಿಚಾರಗಳನ್ನು ಅವರು ನಿರ್ವಹಿಸಲಿದ್ದಾರೆ.