

ನವದೆಹಲಿ: (Delhi explosion) ದೆಹಲಿ ಬಾಂಬ್ ದಾಳಿಯು ಒಂದು ದೊಡ್ಡ ಪಿತೂರಿಯ ಭಾಗವಾಗಿದೆ. ಆಪರೇಷನ್ ಸಿಂಧೂರ್ ನಂತರದ ಸೇಡಿನ ಪಿತೂರಿಯ ಭಾಗವಾಗಿದೆ ಎಂದು ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಪ್ರಮುಖ ಹೇಳಿಕೆ ನೀಡಿದ್ದಾರೆ.
"ಭಯೋತ್ಪಾದಕರು ಬಹಳ ದಿನಗಳಿಂದ ದೆಹಲಿಯ ಮೇಲೆ ಕಣ್ಣಿಟ್ಟಿದ್ದರು. ಅವರು ಅದರಲ್ಲಿ ಯಶಸ್ವಿಯಾದ ಕಾರಣ ಇಂದು ಈ ಘಟನೆ ಸಂಭವಿಸಿದೆ. ಇದು ಒಂದು ಪಿತೂರಿಯ ಭಾಗವಾಗಿದೆ. ಭಯೋತ್ಪಾದಕರು ಆಪರೇಷನ್ ಸಿಂಧೂರ್ಗೆ ಸೇಡು ತೀರಿಸಿಕೊಳ್ಳಲು ಬಯಸುತ್ತಾರೆ. ಭಯೋತ್ಪಾದಕರು ಬಹಳ ಹಿಂದಿನಿಂದಲೂ ರಾಷ್ಟ್ರ ರಾಜಧಾನಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ" ಎಂದು ಮಾಂಝಿ ಸೋಮವಾರ ಬಿಹಾರದ ಗಯಾದಲ್ಲಿ ಹೇಳಿದರು.
ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಬಳಿ ಇಂದು(ನ. 10) ಸಂಜೆ 6.30ರ ಸುಮಾರಿಗೆ ಕಾರೊಂದು ಸ್ಫೋಟಗೊಂಡಿದ್ದು, ಪಕ್ಕದಲ್ಲಿ 7ರಿಂದ 8 ಕಾರುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, ಸುಮಾರು ಜನ ಗಾಯಗೊಂಡಿದ್ದಾರೆ. ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಪಕ್ಕದಲ್ಲಿದ್ದ 7 ರಿಂದ 8 ವಾಹನಗಳು ಸಹ ಬೆಂಕಿಗೆ ಆಹುತಿಯಾಗಿ ಹಾನಿಯಾಗಿವೆ.
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡು, ಹಲವಾರು ವಾಹನಗಳು ಮತ್ತು ಜನರಿಗೆ ಡಿಕ್ಕಿ ಹೊಡೆದಿದೆ. ಹಠಾತ್ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತು, ಜನರು ಓಡಿಹೋದರು.
ತಕ್ಷಣ ಸ್ಥಳಕ್ಕೆ ಸುಮಾರು 20 ಅಗ್ನಿಶಾಮಕದಳ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ. ಗಾಯಾಳುಗಳಮನ್ನು ಹತ್ತಿರದ ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ದಳವು ಘಟನಾ ಸ್ಥಳಕ್ಕೆ ತಲುಪಿದ್ದು ಪರಿಶೀಲಿಸುತ್ತಿದ್ದಾರೆ.
ಸೋಮವಾರ ದೆಹಲಿ ಸ್ಫೋಟದ ಬಗ್ಗೆ ಪ್ರಧಾನಿ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. "ದೆಹಲಿಯಲ್ಲಿ ಇಂದು ಸಂಜೆ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅಧಿಕಾರಿಗಳು ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ" ಎಂದು ಅವರು ಹೇಳಿದರು.
"ದೆಹಲಿಯಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಜೀವ ಮತ್ತು ಆಸ್ತಿಪಾಸ್ತಿ ನಷ್ಟವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪಗಳು. ನಾನು ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಅವರು ಬೇಗನೆ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಉನ್ನತ ಸಂಸ್ಥೆಗಳು ಘಟನೆಯ ಬಗ್ಗೆ ಸಂಪೂರ್ಣ ತುರ್ತಾಗಿ ತನಿಖೆ ನಡೆಸುತ್ತಿವೆ ಮತ್ತು ಸಂಪೂರ್ಣ ತನಿಖೆ ನಡೆಸುತ್ತವೆ" ಎಂದು ಗೃಹ ಸಚಿವ ಅಮಿತ್ ಶಾ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.