ವಿವೇಕ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ. 29ರಂದು

je721538035802367-abc
Published on


ರಾಣೆಬೆನ್ನೂರ: ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ವತಿಯಿಂದ ಜ. 29ರಂದು ಬೆಳಗ್ಗೆ 10.30ಕ್ಕೆ ಆಶ್ರಮದ ಆವರಣದಲ್ಲಿ ವಿವೇಕ ವಿದ್ಯಾರ್ಥಿ ರಾಜ್ಯಮಟ್ಟದ ಲಿಖಿತ ಪರೀಕ್ಷೆಯಲ್ಲಿ ಜಿಲ್ಲಾ ಹಾಗೂ ಶಾಲಾ ಮಟ್ಟದಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜಿ ಮಹಾರಾಜ್ ಹಾಗೂ ಸ್ವಾಮಿ ಆತ್ಮದೀಪಾನಂದಜಿ ಮಹಾರಾಜ್ ಸಾನ್ನಿಧ್ಯ ವಹಿಸುವರು. ಡಿಡಿಪಿಐ ಸುರೇಶ ಹುಗ್ಗಿ, ಬಿಇಒ ಎಂ.ಎಚ್. ಪಾಟೀಲ, ಶಹರ ಠಾಣೆ ಪಿಎಸ್‌ಐ ಗಡ್ಡೆಪ್ಪ ಗುಂಜುಟಗಿ, ಕೆಎಲ್‌ಇ ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್ ವಿ.ಪಿ. ಲಿಂಗನಗೌಡ್ರ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net