ಸೀರೆ ವಶಕ್ಕೆ ಪಡೆದ ಚುನಾವಣಾ ಸಿಬ್ಬಂದಿ

961ff4ed-ac56-4e3e-9e40-9826168e5b7a
Published on

ರಾಮನಗರ: ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಸೀರೆಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿರುವ ಘಟನೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ದಶವಾರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶ್ರೀಕಂಠೇಗೌಡ ಎನ್ನುವ ಮನೆಯಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಸಂಗ್ರಹಿಸಲಾಗಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಫ್ಲೈಯಿಂಗ್​ ಸ್ವ್ಕಾಡ್​ ಮನೆಯಲ್ಲಿದ್ದ ಒಟ್ಟು 120 ಸೀರೆಗಳು ಹಾಗೂ 90 ಸಾವಿರ ರೂ ನಗದು ವಶಕ್ಕೆ ಪಡೆದುಕೊಂಡಿದೆ. ಸೀರೆಗಳ ಪ್ಯಾಕ್​ ಮೇಲೆ ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರ ಹೆಸರಿನ ಸ್ಟಿಕರ್ ಇದ್ದು, ಈ ಸಂಬಂಧ ಎಂ.ಕೆ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net