ಕಿಚಡಿ ಸರ್ಕಾರ ಬೇಡ - ಆರ್.ಅಶೋಕ್

CPT sankalpa 2
Published on
ರಾಮನಗರ: ನಮ್ಮ ರಾಜ್ಯದಲ್ಲಿ ಕಿಚಡಿ ಸರ್ಕಾರ ಬೇಡ. ಕೇಂದ್ರದಂತೆ ರೀತಿ ಸ್ಥಿರವಾದ ಸರ್ಕಾರ ನಮ್ಮ ರಾಜ್ಯದಲ್ಲೂ ಬರಬೇಕು. ಅದಕ್ಕಾಗಿ ಎಲ್ಲರೂ ಸಂಘಟಿತ ಪ್ರಯತ್ನ ಮಾಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಚನ್ನಪಟ್ಟಣದಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಹಾಗೂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮತ್ತೆ ರಾಜ್ಯದಲ್ಲಿ  ನಮ್ಮ ಬಿಜೆಪಿ ಸರ್ಕಾರ ಬರುತ್ತದೆ. ಆರು ತಿಂಗಳಿಗೊಂದು ಸರ್ಕಾರ ಬೇಡ ಅನ್ನುವುದು ನಮ್ಮೆಲ್ಲರ ಅಭಿಪ್ರಾಯ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
ಕಾಂಗ್ರೆಸ್ ಹಾಗೂ ಜೆಡಿಎಸ್ ಅವರು ಈಗಾಗಲೇ ರಾಜ್ಯದಲ್ಲಿ ಯಾತ್ರೆ ಮಾಡಿದ್ದಾರೆ. ನಾವು ಸಹ ನಾಲ್ಕು ತಂಡಗಳಾಗಿ ರಾಜ್ಯಾದ್ಯಂತ ಯಾತ್ರೆ ನಡೆಸುತ್ತಿದ್ದೇವೆ.
ಒಟ್ಟು 15 ದಿನಗಳ‌ಕಾಲ 224 ಕ್ಷೇತ್ರಗಳನ್ನು ಭೇಟಿ ಮಾಡಲಿದ್ದೇವೆ. ಈ ಬಾರಿ ಮತ್ತೆ ಶತಾಯಗತಾಯ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸಿದ್ದೇವೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಅನ್ನು ಮನೆಗೆ ಕಳುಹಿಸಲು ಪ್ಲಾನ್ ಮಾಡಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೇಸ್ ನ ಎ ಟೀಮ್,  ಬಿ ಟೀಮ್ ಅನ್ನು ಮನೆಗೆ ಕಳುಹಿಸಲಾಗುವುದು ಎಂದು ವಿಶ್ವಾಸವ್ಯಕ್ತಪಡಿಸಿದರು.
ಡಬಲ್ ಇಂಜಿನ್ ಸರ್ಕಾರ ಇದರೆ ಅಭಿವೃದ್ಧಿ ಆಗುತ್ತದೆ. ಈ ಕಾರಣದಿಂದಲೇ ದೇಶದ ಪೂರ್ವ ರಾಜ್ಯಗಳಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಬಾವುಟ ಹಾರುತ್ತಿದೆ.
ಎಲ್ಲೆಲ್ಲಿ ನಮ್ಮ‌ ಪಕ್ಷ ಹಿಂದೆ ಬಿದ್ದಿದೆ ಅಲ್ಲಿ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಜಿಲ್ಲೆಯಲ್ಲಿ ಹೆಚ್ಚಿನ ಶ್ರಮ ಹಾಕಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ. ಮುಂದೆ ಹಳೆ ಮೈಸೂರು ಭಾಗದಲ್ಲಿ ಮತ್ತಷ್ಟು ಜನರು ಬಿಜೆಪಿಗೆ ಸೇರುವ ಸಾಧ್ಯತೆ ಇದ್ದು, ಈ ಭಾಗದಲ್ಲಿ ಮತ್ತಷ್ಟು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಎಚ್.ಡಿಕೆ ಹಾಗೂ ಡಿಕೆಗೆ ತಿರುಗೇಟು;
ನಮ್ಮ ಪಕ್ಷದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ಅದನ್ನು ಇಟ್ಟುಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ಅವರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ತುಂಬಾ ಪಾರದರ್ಶಕತೆ ಇದೆ‌‌. ಈ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಲಾಗುವುದು ಎಂದರು.
ಡಿಕೆ ಹಾಗೂ ಎಚ್ ಡಿಕೆ ಈ ಹಿಂದೆ ಜೋಡೆತ್ತು ರೀತಿ ಇದ್ದರು. ಈಗ ಇಬ್ಬರೂ ಕೈ ಎತ್ತಿಕೊಂಡಿರುವುದನ್ನು ಎಲ್ಲರೂ ನೋಡಿದ್ದಾರೆ. ಪ್ರಸುತ್ತ ಅವರಿಬ್ಬರೆ ಕಚ್ಚಾಡುತ್ತಿದ್ದಾರೆ. ಈ ಭಾಗದಲ್ಲಿ ಜೆಡಿಎಸ್ ಗೆ ವೋಟ್ ಹಾಕಿದರೆ, ಕಾಂಗ್ರೆಸ್ ಗೆ ವೋಟ್ ಹಾಕಿದ ರೀತಿ ಆಗುತ್ತದೆ. ಹಾಗಾಗಿ‌ ಈ ಭಾಗದ ಜನತೆ ಬಿಜೆಪಿಗೆ ಬೆಂಬಲ ನೀಡುತ್ತಾರೆ. ಕನಕಪುರದಲ್ಲಿ ಬಿಜೆಪಿ ಪಕ್ಷ ಸಂಘಟನೆ ಇಲ್ಲ ಎಂಬ ವಿಚಾರ ಸುಳ್ಳು. ಕನಕಪುರದಲ್ಲೂ ನಾಳೆ ರ್ಯಾಲಿ ಮಾಡಲಿದ್ದೇವೆ. ಈ ಬಾರಿ ಉತ್ತಮ ಅಭ್ಯರ್ಥಿಯನ್ನು ಕನಕಪುರಕ್ಕೆ ಹಾಕುತ್ತೇವೆ. ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ತಂತ್ರಗಾರಿಕೆ ಮಾಡುತ್ತಿದ್ದೇವೆ ಎಂದರು‌
ಸುಮಲತಾ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕ್, ನಾನು ಈಗಾಗಲೇ ಅವರ ಜೊತೆ ಒನ್ ಟು ಒನ್ ಮಾತಾಡಿದ್ದೇನೆ. ಅವರು ಕೆಲವೊಂದು ಅಭಿಪ್ರಾಯಗಳನ್ನು ಹೇಳಿದ್ದಾರೆ. ಇದನ್ನು ಕೇಂದ್ರ ನಾಯಕರಿಗೆ ತಿಳಿಸಲಾಗಿದೆ. ಅವರು ಗ್ರೀನ್ ಸಿಗ್ನಲ್ ಕೊಟ್ಟ ನಂತರ ಮುಂದಿನ ಬೆಳವಣಿಗೆ ನಡೆಯಲಿವೆ ಎಂಬ ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net