

ರಾಮನಗರ: ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು, ಅಲ್ಲಿಂದ ಹಾರಿ ಎದುರಿಗೆ ಬರುತ್ತಿದ್ದ ಬೈಕ್ಗೆ ಗುದ್ದಿದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಅವಘಡ ಸಂಭವಿಸಿದೆ.
ರಾಹುಲ್(18), ಅಭಿಷೇಕ್ (21) ಮೃತರು. ಇವರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ನಿವಾಸಿಗಳು. ಮತ್ತೊಬ್ಬ ಬೈಕ್ ಸವಾರ ಹರ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ನಿಮಾನ್ಸ್ಗೆ ರವಾನಿಸಲಾಗಿದೆ.
ಕಾರು ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿತ್ತು. ಬೈಕ್ ಮೈಸೂರು ಕಡೆಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಬೈಕ್ಗೆ ಗುದ್ದಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)