ಕರೊನಾ ಲಸಿಕೆ ಪಡೆದ ರಾಷ್ಟ್ರಪತಿ ರಾಮನಾಥ ಕೋವಿಂದ್​

corona
Published on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕರೊನಾ ಲಸಿಕೆ ಪಡೆದ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಲಸಿಕೆಯ ಮೊಲನೇ ಡೋಸೇಜ್​ನ್ನು ಪಡೆದಿದ್ದಾರೆ. ದೆಹಲಿಯ ಆರ್ಮಿ (ರಿಸರ್ಚ್ ಆ್ಯಂಡ್ ರೆಫರಲ್) ಆಸ್ಪತ್ರೆಯಲ್ಲಿ ಅವರು ಲಸಿಕೆ ಹಾಕಿಸಿಕೊಂಡಿದ್ದಾರೆ.

ನಮ್ಮ ದೇಶದಲ್ಲಿ ವಿಶ್ವದ ಅತಿ ದೊಡ್ಡ ಕರೊನಾ ಲಸಿಕಾ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ. ಅದರ ಬಗ್ಗೆ ನನಗೆ ಹೆಮ್ಮೆ ಇದೆ. ಎರಡು ಲಸಿಕೆಯನ್ನು ನಮ್ಮ ದೇಶದಲ್ಲಿಯೇ ತಯಾರಿಸಿರುವುದು ನಮ್ಮ ಹೆಮ್ಮೆ ಎಂದು ಲಸಿಕೆ ಪಡೆದ ಅವರು ಹೇಳಿದ್ದಾರೆ.

ದೇಶದಲ್ಲಿ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ದೆಹಲಿಯ ಏಮ್ಸ್​ನಲ್ಲಿ ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net