ರಾಮಾಯಣ ಸನ್ನಿವೇಶಗಳು ಇಂದಿಗೂ ಪ್ರಸ್ತುತ

17 NJD 01
ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ದರ್ಶನ್ ಧ್ರುವ ನಾರಾಯಣ ಹಾಗೂ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ಶಿವಕುಮಾರ್ ಕಾಸ್ನೂರ್, ಜೆರಾಲ್ಡ್ ರಾಜೇಶ್, ಮಂಜುನಾಥ್ ಇತರರು ಇದ್ದರು.
Published on

ನಂಜನಗೂಡು: ವಾಲ್ಮೀಕಿ ಮಹರ್ಷಿಗಳು ರಚಿಸಿದ ರಾಮಾಯಣದಲ್ಲಿ ಬರುವ ಸನ್ನಿವೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶ್ರೀ ನಂಜುಂಡೇಶ್ವರನ ದೇವಾಲಯದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಮನುಷ್ಯ ತಾನು ಬದುಕುವ ವಿಚಾರಗಳನ್ನು ತಿಳಿಸಲಾಗಿದೆ. ವಾಲ್ಮೀಕಿ ಮಹರ್ಷಿ ಸಮಾಜದಲ್ಲಿ ಬದುಕುವ ಪ್ರತಿಯೊಬ್ಬ ಮನುಷ್ಯನಿಗೂ ದಾರಿದೀಪ ತೋರಿಸಿದ್ದಾರೆ ಎಂದು ಬಣ್ಣಿಸಿದರು.

ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಹಿಂದುಳಿದವರು ವಾಸಿಸುತ್ತಿದ್ದಾರೆ. ನಮ್ಮ ತಂದೆ ದಿ.ಆರ್ ಧ್ರುವನಾರಾಯಣ ಅವರ ಆಶಯದಂತೆ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಜನರ ಅಭಿವೃದ್ಧಿಗೆ ಸದಾ ಸಿದ್ಧನಿದ್ದೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಮಹರ್ಷಿ ವಾಲ್ಮೀಕಿ ಇಡೀ ಜಗತ್ತಿಗೆ ರಾಮಾಯಣ ಪರಿಚಯಿಸಿದ ಮಹಾನ್ ಸಂತ. ಶತಮಾನಗಳ ಹಿಂದೆಯೇ ಸಹೋದರತೆಯನ್ನು ಸಾರಿದ ಋಷಿಮುನಿ ಎಂದರು.

ನಗರದ ಜೂನಿಯರ್ ಕಾಲೇಜು ಮೈದಾನದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಅಧ್ಯಕ್ಷತೆ ವಹಿಸಿದ್ದರು. ಇಒ ಜೆರಾಲ್ಡ್ ರಾಜೇಶ್, ಮುಖ್ಯ ಭಾಷಣಕಾರ ಮಂಜುನಾಥ್, ನಗರಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ, ನಗರಸಭಾ ಸದಸ್ಯರು, ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net