ಸಿಐಡಿಗೆ ಸಿಡಿ ಕೇಸ್​! ಷಡ್ಯಂತ್ರ ಮಾಡಿದ್ದವರನ್ನ ಜೈಲಿಗೆ ಕಳಿಸೋದೇ ನನ್ನ ಗುರಿ: ಜಾರಕಿಹೊಳಿ

ramesh jarakiholi cd
ramesh jarakiholi
Published on

ಬೆಂಗಳೂರು: ರಾಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣವನ್ನು ಇನ್ನೆರಡು ದಿನದಲ್ಲಿ ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಬಗ್ಗೆ ಇಂದು ಸಿಎಂ ಜತೆ ಗೃಹ ಸಚಿವರು ಸಮಾಲೋಚನೆ ನಡೆಸಲಿದ್ದು, ನಂತರ ಹಿರಿಯ ಸಚಿವರೊಂದಿಗೆ ಚರ್ಚಿಸಿ ಸಿಐಡಿ ತನಿಖೆಗೆ ಸಿಎಂ ಆದೇಶಿಸಲಿದ್ದಾರೆ. ಅಲ್ಲದೆ ಸಿಡಿ ಪ್ರಕರಣದ ತನಿಖೆ ವಿಚಾರವಾಗಿ ಇಂದು ಬೆಳಗ್ಗೆ ಸಿಎಂ ಬಿಎಎಸ್​ವೈ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಕಚೇರಿಯಲ್ಲಿ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿರಿ ಸೆಕ್ಸ್​ ವಿಡಿಯೋದಲ್ಲಿ ರಮೇಶ್​ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್​ ಕುಮಟಳ್ಳಿ!

ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಯುವತಿಯೊಬ್ಬಳಿಗೆ ಕೆಪಿಟಿಸಿಎಲ್​ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಸಂತ್ರಸ್ತ ಯುವತಿಗೆ ಜೀವ ಬೆದರಿಕೆ ಇದೆ ಎಂದು ಆಕೆಯ ಕುಟುಂಬಸ್ಥರು ನನ್ನ ಬಳಿ ಸಹಾಯ ಕೇಳಿಕೊಂಡು ಬಂದಿದ್ದರು. ಈ ಪ್ರಕರಣದ ಸತ್ಯಾಸತ್ಯತೆಯನ್ನ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ವೈರಲ್​ ಆಗಿತ್ತು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿತ್ತು. ಕೊನೆಗೆ ನೈತಿಕ ಹೊಣೆಹೊತ್ತು ರಮೇಶ್​ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಮೊನ್ನೆ ಇದ್ದಕ್ಕಿದ್ದಂತೆ ದಿನೇಶ್​ ಕಲ್ಲಹಳ್ಳಿ ಕೇಸ್​ ಹಿಂಪಡೆಯುವುದಾಗಿ ಹೇಳುವ ಮೂಲಕ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಆರಂಭದಿಂದಲೂ ಇದೊಂದು ರಾಜಕೀಯ ಷಡ್ಯಂತರ, ನಾನು ನಿರಪರಾಧಿ. ಆಯುವತಿ ಯಾರೆಂದು ನನಗೆ ಗೊತ್ತೇ ಇಲ್ಲ ಎಂದಿದ್ದ ರಮೇಶ್​ ಜಾರಕಿಹೊಳಿ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇಂದು ಸುದ್ದಿಗೋಷ್ಠಿ ನಡೆಸಿದ ಜಾರಕಿಹೊಳಿ, ಆ ಸಿಡಿ ನೂರಕ್ಕೆ ನೂರರಷ್ಟು ನಕಲಿ. ನಾನು ನಿರಪರಾಧಿ. ಈ ವಿಷಯ ನನಗೆ ನಾಲ್ಕು ತಿಂಗಳು ಮೊದಲೇ ತಿಳಿದಿತ್ತು. 26 ಗಂಟೆ ಮೊದಲೇ ಹೈಕಮಾಂಡ್ ಇದರ ಬಿಡುಗಡೆ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಆ ಕ್ಷಣದಲ್ಲಿ ನಾನು ಧೈರ್ಯ ಕಳೆದುಕೊಳ್ಳಲಿಲ್ಲ. ಕಾನೂನು ಹೋರಾಟಕ್ಕೆ ಹೋಗಲಿಲ್ಲ. 2+3+4 ಸೇರಿ ಈ ಕೆಲಸ ಮಾಡಿದ್ದಾರೆ. ಓರಿಯನ್ ಮಾಲ್ ಅಕ್ಕಪಕ್ಕ ಕೆಲಸ ಆಗಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನ ಕೈಬಿಡಲ್ಲ. ಅವರನ್ನು ಜೈಲಿಗೆ ಹಾಕಿಸುವುದು ನನ್ನ ಗುರಿ ಎಂದರು. ಈ ಕುರಿತು ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ಪ್ರತಿ ದೂರು ರಮೇಶ್ ಜಾರಕಿಹೊಳಿ ಸಿದ್ಧತೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net