

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ನಟ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್, ಮಾಧ್ಯಮಗಳ ಕಣ್ತಪ್ಪಿಸಿಕೊಂಡು ಹೊರಟ್ಟಿದ್ದು ಏಕೆ? ಎಂಬ ಕುತೂಹಲ ಮೂಡಿಸಿದೆ.
ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಎಸ್ಐಟಿ(ಸ್ಪೆಷಲ್ ಇನ್ವೆಷ್ಟಿಗೇಶನ್ ಟೀಂ) ತನಿಖೆ ಚುರುಕುಗೊಳಿಸಿದೆ. ಸಿಡಿ ಕೇಸ್ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಹಲವು ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆದಿರುವ ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಈ ನಡುವೆ ಇಂದ್ರಜಿತ್ ಲಂಕೇಶ್ ಅವರು ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಮಾಸ್ಕ್ ಮತ್ತು ಮಪ್ಲರ್ ಧರಿಸಿ ಭೇಟಿ ನೀಡಿರುವುದು ಸಿಡಿ ಪ್ರಕರಣಕ್ಕೆ ಏನಾದರೂ ಟ್ವಿಸ್ಟ್ ನೀಡಲಿದೆಯೇ? ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಇದನ್ನೂ ಓದಿರಿ ಅಜ್ಜಯ್ಯನ ಜಾತ್ರೆಗೆ ಬಂದವ ಅಣ್ಣನ ಕಣ್ಣೆದುರಲ್ಲೇ ಸಾವಿನ ಮನೆಯ ಕದ ತಟ್ಟಿದ..!
ಮಾ.2ರಂದು ಜಾರಕಿಹೊಳಿಯದ್ದು ಎನ್ನಲಾದ ಸಿಡಿ ವೈರಲ್ ಆಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ- ಕಲ್ಲೋಲ ಸೃಷ್ಟಿಯಾಗಿದೆ. ಮರುದಿನವೇ ನೈತಿಕಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಗೆ ನಿರ್ಧರಿಸುತ್ತಿದ್ದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಮೇಶ್ ಜಾರಕಿಹೊಳಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ, ಇದು ನಕಲಿ ಸಿಡಿ ಎಂದು ದೂರು ದಾಖಲಿಸಿದ್ದರು. ಇಷ್ಟೆಲ್ಲ ಅವಾಂತರದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ವಿಡಿಯೋದಲ್ಲಿ ಕಾಣಿಸಿಕೊಂಡ ಸಿಡಿ ಕೇಸ್ನ ಯುವತಿ, ರಮೇಶ್ ಜಾರಕಿಹೊಳಿ ಅವರು ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ನನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದ ನನ್ನ ಮಾನ ಮರ್ಯಾದೆ ಊರು ತುಂಬಾ ಹರಾಜಾಗಿದೆ. ಆ ಅಶ್ಲೀಲ ವಿಡಿಯೋ ಹೇಗೆ ಮಾಡಿದಾರೋ ನನಗೆ ಗೊತ್ತಿಲ್ಲ. ದಯವಿಟ್ಟು ನನಗೆ ರಕ್ಷಣೆ ನೀಡಬೇಕು ಎಂದು ಕೇಳಿಕೊಂಡಿದ್ದಳು.