ಡಿಕೆಶಿ ವಿರುದ್ಧ ಅಶ್ಲೀಲ ಪದ ಬಳಕೆ: ವಿಷಾದ ವ್ಯಕ್ತಪಡಿಸಿದ ಜಾರಕಿಹೊಳಿ

dks jarakiholi
Published on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನುದ್ದೇಶಿಸಿ 'ಗಾಂ..' ಎಂಬ ಅಶ್ಲೀಲ ಪದ ಬಳಕೆ ಮಾಡಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಳಸಿದ ಪದ ವಾಪಸ್ಸು ಪಡೆಯುತ್ತೇನೆ. ಅದು ಸರಿಯಾದದ್ದಲ್ಲ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಡಿಕೆಶಿ ಹೇಳಿದ ಹಾಗೇ ಇದು ನನ್ನ ವೈಯಕ್ತಿಕ ಸಮಸ್ಯೆ ಇರಬಹುದು. ಅದನ್ನು ನಾನೇ ಎದುರಿಸುತ್ತೇನೆ, ರಾಜಕೀಯವಾಗಿಯೂ ಎದುರಿಸುತ್ತೇನೆ. ಇನ್ನೊಂದು ಕೇಸ್​ ದಾಖಲಿಸುತ್ತೇನೆ. ಕಾಂಗ್ರೆಸ್ ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ರಮೇಶ್ ಜಾರಕಿಹೊಳಿ ತಮ್ಮ ನಾಯಕ ಡಿಕೆಶಿ ವಿರುದ್ಧ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net