

ಬೆಂಗಳೂರು: ( Ramya ) ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ನಟಿ ರಮ್ಯಾ ಅವರು ಇನ್ಸ್ಟಾಗ್ರಾಂ ಸ್ಟೋರಿ ಹಂಚಿಕೊಂಡಿದ್ದು, ಅದರಲ್ಲಿ ಕಾನೂನಿನ ಮುಂದೆ ಎಲ್ಲರು ಸಮಾನರು ಎಂದಿದ್ದರು.. ಇದೀಗ ಖಾಸಗಿವಾಹಿನಿ ಜತೆ ಮಾತನಾಡಿ, ದರ್ಶನ್ ಅವರ ಕುರಿತಾಗಿ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
ಖಾಸಗಿವಾಹಿನಿ ಜತೆ ಮಾತನಾಡಿದ ನಟಿ ರಮ್ಯಾ, ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ನನಗೆ ಮಿಕ್ಸಡ್ ರಿಯಾಕ್ಷನ್ ಇತ್ತು. ಒಂದು ಕಡೆ ನನಗೆ ಬೇಸರವಾಯ್ತು. ದರ್ಶನ್ ಅವರ ಜತೆ ನಾನು ಸಿನಿಮಾ ಮಾಡಿದ್ದೇನೆ.. ಅವರು ನನಗೆ ಗೊತ್ತು. ಅವರ ಜೀವನ ಹಾಳು ಮಾಡಿಕೊಂಡರು ಎನ್ನುವ ಬೇಸರ ನನಗೆ ಇದೆ. ಈ ಹಿಂದೆ ಸಿನಿಮಾ ಶೋಟಿಂಗ್ ವೇಳೆ ಅವರು ಹೇಗೆ ಸಿನಿಮಾ ಇಂಡಸ್ಟ್ರೀಗೆ ಬಂದರು ಎನ್ನುವ ಕುರಿತಾಗಿ ನನ್ನ ಜೊತೆ ಹಂಚಿಕೊಂಡಿದ್ದರು. ಲೈಟ್ ಬಾಯ್ ಆಗಿ ಕೆಲಸ ಮಾಡಿ.. ಈ ಮಟ್ಟಕ್ಕೆ ಬೆಳೆದಿದ್ದಾರೆ ಎನ್ನುವುದು ಕೇಳಿ ನನಗೆ ಹೆಮ್ಮೆ ಇತ್ತು. ಆದರೆ ಇತ್ತೀಚೆಗೆ ಅವರ ನಡುವಳಿಕೆ ನೋಡಿ ನನಗೆ ಬೇಸರವಾಯ್ತ ಎಂದಿದ್ದಾರೆ.
ದರ್ಶನ್ ಅವರ ಅಕ್ಕ- ಪಕ್ಕದಲ್ಲಿ ಯಾರು ಒಳ್ಳೆಯವರಿಲ್ಲವೇನೋ ಗೊತ್ತಿಲ್ಲ..ಒಳ್ಳೆಯ ದಾರಿಯಲ್ಲಿ ನಡೆದುಕೊಂಡು ಹೋಗಲು...ಈ ಮಟ್ಟಕ್ಕೆ ಬೆಳೆದ ಮೇಲೆ ಸಮಾಜದಲ್ಲಿ ಜವಾಬ್ದಾರಿ ಇರುತ್ತದೆ. ಅವರ ಸುತ್ತಮುತ್ತಲಿನವರು ಒಳ್ಳೆಯವರನ್ನು ಇಟ್ಟುಕೊಳ್ಳಬಹುದು ಇತ್ತು. ಆದರೆ ಇನ್ನೊಂದು ಕಡೆ ನನಗೆ ಈ ಜಡ್ಜ್ಮೆಂಟ್ ಕೆಳಿದ ಮೇಲೆ ರಿಲೀಫ್ ಅಂತ ಅನ್ನಿಸಿತು. ಇತ್ತೀಚೆಗೆ ನಾವು ಹೋಗುತ್ತಿರುವ ಸಮಾಜ ತುಂಬಾ ಕೆಟ್ಟದಾರಿಯಲ್ಲಿದ್ದೇವೆ ಅನ್ನಿಸಿತು. ಹೆಣ್ಣುಮಕ್ಕಳ ರಕ್ಷಣೆ, ಗೌರವ ಇರಬೇಕು. ಇತ್ತೀಚೆಗೆ ಸುಪ್ರಿಂ ಕೋರ್ಟ್ ತೀರ್ಪು ಬಂದಾಗ ನಾನು ಪೋಸ್ಟ್ ಮಾಡಿದ್ದಕ್ಕೆ ಎಷ್ಟೊಂದು ಜನ ನನಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ನಾವೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಹೀಗೆ ಆಗುತ್ತದೆ. ನ್ಯಾಯ ಅಂದ್ರೆ ಎಲ್ಲರಿಗೂ ಒಂದೆ ಎಂದಿದ್ದಾರೆ.
2024ರ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಈ ಹತ್ಯೆಯ ಕೇಸ್ನಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಜುಲೈ 24ರಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ಸರ್ಕಾರ ಹಾಗೂ ದರ್ಶನ ಪರ ವಕೀಲರ ವಾದವನ್ನು ಆಲಿಸಿತು. ಬಳಿಕ ಎರಡೂ ಕಡೆಯ ವಕೀಲರಿಗೆ ಲಿಖಿತ ವಾದಾಂಶವನ್ನು ಸಲ್ಲಿಸಲು ಕೋರ್ಟ್ ಒಂದು ವಾರಗಳ ಗಡುವು ನೀಡಿದ್ದು, ಆ ಬಳಿಕ ತೀರ್ಪು ಪ್ರಕಟಿಸಲಿದೆ ಎಂದಿತ್ತು.
3 ಪುಟದೊಳಗೆ ಲಿಖಿತ ವಾದ ಸಲ್ಲಿಸಲು ನ್ಯಾಯಾಲಯ ಹೇಳಿದೆ. ಸರ್ಕಾರದ ಪರ ಸಿದ್ಧಾರ್ಥ್ ಲೂತ್ರಾ ಹಾಗೂ ನಟ ದರ್ಶನ್ ಪರ ಸಿದ್ಧಾರ್ಥ್ ದವೆ ವಾದ ಮಂಡನೆ ಮಾಡಿದರು. ಸಾಕ್ಷಿಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆ, ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧ ಹಾಗೂ ಕೊಲೆಗೆ ಕಾರಣವೇನು? ಮುಂತಾದ ವಿಚಾರಗಳ ಬಗ್ಗೆ ನ್ಯಾಯಾಲಯ ಪ್ರಶ್ನೆಗಳನ್ನು ಕೇಳಿತು. ಎರಡೂ ಕಡೆಯ ವಕೀಲರು ಪ್ರಬಲವಾಗಿ ವಾದ ಮಂಡನೆ ಮಾಡಿದ್ದು, ವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.
ಕೊಲೆ ಕೇಸ್ನ ಆರೋಪಿಗಳಾದ ನಟ ದರ್ಶನ್, ಪವಿತ್ರಗೌಡ, ಪ್ರದೂಶ್, ಲಕ್ಷ್ಮಣ್, ನಾಗರಾಜು ಹಾಗೂ ಅನುಕುಮಾರ್ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕಳೆದ(2024) ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುದೀರ್ಘ ವಾದ-ವಿವಾದ ಪರಿಶೀಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು. ಇಂದು ಈ ಪ್ರಕರಣದ ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ಹಿಂದೆ ಹೈ ಕೋರ್ಟ್ ನೀಡಿದ್ದ ಜಾಮೀನನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ದರ್ಶನ್ ಸೇರಿದಂತೆ ಎಲ್ಲ 7 ಆರೋಪಿಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ ರದ್ದು ಮಾಡಿತು. ಹೈಕೋರ್ಟ್ ನೀಡಿದ ಜಾಮೀನಿನಲ್ಲಿ ದೋಷವಿದೆ. ಜೈಲಿನಲ್ಲಿ ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಈ ಪ್ರಕರಣ ಬೆಳಗಕಿಗೆ ಬಂದ ಕೂಡಲೇ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇದೊಂದು ಲ್ಯಾಂಡ್ ಮಾರ್ಕ್ ತೀರ್ಪು ಎಂದು ಸುಪ್ರೀಂಕೋರ್ಟ್ ಹೇಳಿತು. ಅಲ್ಲದೆ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ ಎಂದಿದೆ.
ಆರೋಪಿ ಜೈಲಿನ ಲಾನ್ನಲ್ಲಿ ಸಿಗರೇಟ್ ಸೇದುವುದು ಕಂಡಬಂದರೆ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜೈಲಿಗೆ ಹೋದ ನಂತರ ಆರೋಪಿ ಸಾಮಾನ್ಯ ಕೈದಿಯಂತೆ ಇರಬೇಕು. ಈ ಮುಂಚೆ ಆತನಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ಕೊಡಲಾಗಿದೆ. ಇನ್ಮುಂದೆ ಸಾಮಾನ್ಯ ಕೈದಿಯಂತೆ ಇರಬೇಕು. ಜೈಲಿನ ರಾಜಾತಿಥ್ಯದ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
A2 ದರ್ಶನ್ ಜೊತೆ A1 ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.