

ಶಿವಮೊಗ್ಗ: ಒಂದು ತಿಂಗಳ ಉಪವಾಸದ ಬಳಿಕ ಮುಸ್ಲಿಂ ಸಮುದಾಯದವರು ಸೋಮವಾರ ಜಿಲ್ಲಾಧ್ಯಂತ ಸಡಗರದಿಂದ ರಂಜಾನ್ ಆಚರಿಸಿದರು. ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ತಂಡೋಪತಂಡವಾಗಿ ದರ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಶಿವಮೊಗ್ಗ ಡಿಸಿ ಕಚೇರಿ ಎದುರಿನ ದರ್ಗಾ ಮೈದಾನದಲ್ಲಿ ನೂರಾರು ಮಂದಿ ಏಕಕಾಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಪ್ರಾರ್ಥನೆ ಬಳಿಕ ಕೆಲವರು ಆತ್ಮೀಯರು ಹಾಗೂ ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ವಿನಿಮಯ ಮಾಡಿಕೊಂಡರು. ಚಿಕ್ಕ ಮಕ್ಕಳು ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದರು. ಶಿವಮೊಗ್ಗದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು.
ನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಎಸ್.ಪಿ.ಶೇಷಾದ್ರಿ ಮುಂತಾದವರು ಈದ್ಗಾ ಮೈದಾನಕ್ಕೆ ತೆರಳಿ ಮುಸ್ಲಿಂರಿಗೆ ಹಬ್ಬದ ಶುಭಾಶಯ ಕೋರಿದರು.