ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಬಾಲಿವುಡ್ ನಟ ರಣಬೀರ್ ಕಪೂರ್ ವಿರುದ್ಧ ದೂರು

Ranbir Kapoor
Published on

ಮುಂಬೈ: ಬಾಲಿವುಡ್ ನಟ ರಣಬೀರ್ ಕಪೂರ್ ಕ್ರಿಸ್‌ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತು ಅವರ ಕುಟುಂಬದವರು "ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ" ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮುಂಬೈನಲ್ಲಿ ದೂರು ನೀಡಿದ್ದಾರೆ.

ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ಜನಪ್ರಿಯ ನಟ ರಣಬೀರ್ ಕಪೂರ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಕ್ರಿಸ್‌ಮಸ್ ಆಚರಣೆ ವೇಳೆ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಿಂದೂ ಧರ್ಮದಲ್ಲಿ ಇತರ ದೇವತೆಗಳನ್ನು ಆಹ್ವಾನಿಸುವ ಮೊದಲು ಅಗ್ನಿ ದೇವರನ್ನು ಪೂಜಿಸಲಾಗುತ್ತದೆ.  ಆದರೆ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಕ್ರಿಶ್ಚಿಯನ್ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮದ್ಯ ಸೇವಿಸಿ ಜೈ ಮಾತಾ ದಿ ಎಂದು ಘೋಷಣೆ ಕೂಗಿದ್ದಾರೆ ಎಂದು ಮುಂಬೈ ಮೂಲದ ಸಂಜಯ್ ತಿವಾರಿ ದೂರಿನಲ್ಲಿ ತಿಳಿಸಿದ್ದಾರೆ. ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಮುಂಬೈನ ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೈರಲ್ ವಿಡಿಯೋವೊಂದರಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ರಣಬೀರ್ ಕಪೂರ್ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಲಾಗಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ. ರಣಬೀರ್ ಕಪೂರ್ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಂಜಯ್ ತಿವಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net