ಬಿಜೆಪಿ ಹಿರಿಯ ಮುಖಂಡ ವಿಶ್ವನಾಥ ಪಾಟೀಲ ಮೃತ

22-RNR-05A vishwanath patil
Published on

ರಾಣೆಬೆನ್ನೂರ: ಬಿಜೆಪಿ ಹಿರಿಯ ಮುಖಂಡ ಹಾಗೂ ನಗರದ ನಿವಾಸಿ ವಿಶ್ವನಾಥ ಶಂಕರಗೌಡ ಪಾಟೀಲ (54) ಬುಧವಾರ ರಾತ್ರಿ ಅನಾರೋಗ್ಯದಿಂದ ನಿಧನ ಹೊಂದಿದರು.
ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ವಿಶ್ವನಾಥ ಪಾಟೀಲ ಭಾರತೀಯ ಜನತಾ ಪಕ್ಷದ ತಾಲೂಕು ಗ್ರಾಮೀಣ ಘಟಕದ ಅಧ್ಯಕ್ಷರಾಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಗುರುವಾರ ಅವರ ಪಾರ್ಥಿವ ಶರೀರವನ್ನು ನಗರದ ಬಿಜೆಪಿ ಕಾರ್ಯಾಲಯಕ್ಕೆ ತಂದು ಪೂಜೆ ಸಲ್ಲಿಸಿ ನಂತರ ದೇವರಗುಡ್ಡ ರಸ್ತೆಯ ವೀರಶೈವ ಲಿಂಗಾಯತರ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸಲಾಯಿತು.
ಮಾಜಿ ಸಿಎಂ ಅವರಿಂದ ಅಂತಿಮ ದರ್ಶನ…
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮೃತ ವಿಶ್ವನಾಥ ಪಾಟೀಲರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದರು. ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ಬಸವರಾಜ ಅರಬಗೊಂಡ, ಡಾ. ಬಸವರಾಜ ಕೇಲಗಾರ, ಭಾರತಿ ಜಂಬಗಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net