ವಿದ್ಯುತ್ ದರ ಏರಿಕೆ ಖಂಡಿಸಿ ರೈತರಿಂದ ಪ್ರತಿಭಟನೆ

15-RNR-01
Published on

ರಾಣೆಬೆನ್ನೂರ: ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಗುರುವಾರ ನಗರದಲ್ಲಿ ಹೆಸ್ಕಾಂ ಕಚೇರಿಯಲ್ಲಿ ವಿಭಾಗಾಧಿಕಾರಿ ಎನ್.ಸಿ. ಬೆಳಕೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿರುವುದು ಸಾರ್ವಜನಿಕರಿಗೆ ಆಘಾತ ಉಂಟು ಮಾಡಿದೆ. ಇದರಿಂದ ಎಲ್ಲ ರೀತಿಯ ವಸ್ತುಗಳು ಹಾಗೂ ಆಹಾರ ಪದಾರ್ಥಗಳ ಬೆಲೆಗಳಲ್ಲಿಯೂ ಏರಿಕೆಯಾಗಿವೆ.
ಮೇಲಾಗಿ ಸರ್ಕಾರ ದಿಢೀರ ವಿದ್ಯುತ್ ದರ ಹೆಚ್ಚಿಸಿರುವುದು ಸಾರ್ವಜನಿಕರಲ್ಲಿ ಬೇಸರ ಮತ್ತು ಗೊಂದಲ ಮೂಡಿಸಿದೆ. ರಾಜ್ಯ ಸರ್ಕಾರ ಜನರಿಗೆ ಪುಕ್ಕಟೆಯಾಗಿ ವಿದ್ಯುತ್ ನೀಡಲು ಈ ರೀತಿ ದರ ಹೆಚ್ಚಳ ಮಾಡಿದೆ ಎಂಬುದು ಸಾರ್ವಜನಿಕರ ಅಭಿಮತವಾಗಿದೆ. ಆದ್ದರಿಂದ ಕೂಡಲೇ ಸರ್ಕಾರ ಹೆಚ್ಚಿಸಿರುವ ವಿದ್ಯುತ್ ದರ ಕಡಿಮೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net