ರಾಣೆಬೆನ್ನೂರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕ ಹಾಗೂ ತಾಲೂಕು ಕದಳಿ ಮಹಿಳಾ ವೇದಿಕೆ, ಎಸ್‌ಜೆಎಂವಿ ಮಹಿಳಾ ಕಾಲೇಜ್ ವತಿಯಿಂದ ಜು. 5ರಂದು ಮಧ್ಯಾಹ್ನ 12.30ಕ್ಕೆ ನಗರದ ಎಸ್‌ಜೆಎಂವಿ ಮಹಿಳಾ ಕಾಲೇಜಿನ ಆವರಣದಲ್ಲಿ 2023-24ನೇ ಸಾಲಿನ ವಚನ ಚಿಂತನ ಉದ್ಘಾಟನಾ ಸಮಾರಂಭ ಜರುಗಲಿದೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ ಶಿಡ್ಲಾಪುರ ಉದ್ಘಾಟಿಸಿ, ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಕಾಲೇಜ್‌ನ ಪ್ರಾಚಾರ್ಯ ಡಾ. ಆರ್.ವಿ. ಹೆಗಡಾಳ ಅಧ್ಯಕ್ಷತೆ ವಹಿಸುವರು.
ಕಾಲೇಜ್‌ನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಆರ್.ಎಂ. ಚಿದಾನಂದಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷೆ ರಾಜೇಶ್ವರಿ ಪಾಟೀಲ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.