ವಿಶ್ವ ವಿದ್ಯಾಲಯ ಮುಚ್ಚುವ ವಿಚಾರ ವಿರೋಧಿಸಿ ಪ್ರತಿಭಟನೆ

18-RNR-04
Published on

ರಾಣೆಬೆನ್ನೂರ: ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾಥಿರ್ ಪರಿಷತ್​ (ಎಬಿವಿಪಿ) ವತಿಯಿಂದ ನಗರದ ಬಸ್​ ನಿಲ್ದಾಣದ ಎದುರು ಮಂಗಳವಾರ ಮಾನವ ಸರಪಳಿ ನಿಮಿರ್ಸಿ ಪ್ರತಿಭಟನೆ ನಡೆಸಲಾಯಿತು.

ವಿಶ್ವವಿದ್ಯಾಲಯಗಳು ವಿದ್ಯಾಥಿರ್ಗಳಿಗೆ ವಿದ್ಯಾರ್ಜನೆಯ ಕೇಂದ್ರಗಳಾಗಿದ್ದು, ಅಲ್ಲಿಂದ ಹೊರಡುವ ವಿದ್ಯಾಥಿರ್ಗಳು ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ. ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನ ನೀಡುವುದು ಸರ್ಕಾರಗಳ ಆದ್ಯ ಕರ್ತವ್ಯವಾಗಿದೆ. ಆದರೆ, ಅಂತಹ ಜ್ಞಾನ ದೀವಿಗೆ ಬೆಳಗಿಸುವ ವಿಶ್ವ ವಿದ್ಯಾನಿಲಯಗಳನ್ನು ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದು ಖಂಡನೀಯ.

ಆಥಿರ್ಕ ಹಾಗೂ ಮೂಲಭೂತ ಸೌಲಭ್ಯಗಳ ನೆಪ ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ. ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋ ಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತದೆ. ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು.

ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನ ನೀಡಿ ವಿಶ್ವವಿದ್ಯಾಲಯಗಳ ಉನ್ನತಿಕರಣ ಮಾಡಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ತಹಸೀಲ್ದಾರ್​ ಆರ್​.ಎಚ್​. ಭಾಗವಾನ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಟನೆಯ ಉತ್ತರ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಲಾಷ ಬದಾಮಿ, ನಗರ ಕಾರ್ಯದಶಿರ್ ಪವನಕುಮಾರ ಇಟಗಿ, ಪ್ರಮುಖರಾದ ಎಲ್ಲಮ್ಮ, ಸುಶ್ಮಿತಾ, ಅಕ್ಷತಾ, ಹರೀಶ, ನಂದೀಶ ಪೂಜಾರ, ದರ್ಶನ ತಗ್ಗಿನ, ಬಸವರಾಜ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net