

ರಾಣೆಬೆನ್ನೂರ: ಸಂ&ಸಂಸ್ಥೆಗಳು ಜನಪರವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಅವುಗಳ ಉದ್ದೇಶ ಈಡೇರಿದಂತಾಗುತ್ತದೆ ಎಂದು ಸ್ಥಳಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್ ಹೇಳಿದರು.
ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ವನಸಿರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ 20ನೇ ವರ್ಷದ ವಾಷಿರ್ಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಡಿ. ಬಳಿಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ರೂಪಾ ನಾಯ್ಕ, ಸಿಕಂದರ ಮೀರಾ ನಾಯ್ಕ ಅವರಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಪ್ರಮುಖರಾದ ರಾಮಚಂದ್ರ, ಹಬೀಬಬಾನು ಹಾನಗಲ್ಲ, ರೇಣುಕಾ ಗುಡಿಮನಿ, ಜುಬೇದಾ ನಾಯ್ಕ, ವೆಂಕಟೇಶ, ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.