

ರಾಣೆಬೆನ್ನೂರ: ಸ್ಥಳಿಯ ಪರಿವರ್ತನ ಸಂಸ್ಥೆ ವತಿಯಿಂದ ನಗರದ ಕೆಎಲ್ಇ ಶಿಕ್ಷಣ ಸಂಸ್ಥೆಯ ರಾಜ ರಾಜೇಶ್ವರಿ ಮಹಾವಿದ್ಯಾಲಯದ ಆವರಣದಲ್ಲಿ ಫೆ. 7ರಿಂದ 9ರ ವರೆಗೆ ಕರ್ನಾಟಕ ವೈಭವ ವೈಚಾರಿಕ ಹಬ್ಬ ಆಯೋಜಿಸಲಾಗಿದೆ.
ಫೆ. 7ರಂದು ಬೆಳಗ್ಗೆ 10ಕ್ಕೆ ಪ್ರದಶಿರ್ನಿಯನ್ನು ಹಂಪಿ ಕನ್ನಡ ವಿವಿ ಕುಲಪತಿ ಡಾ. ಡಿ.ವಿ. ಪರಮಶಿವಮೂತಿರ್ ಉದ್ಘಾಟಿಸಲಿದ್ದು ಕೊಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕನ್ನಡ ಚಲನಚಿತ್ರ ನಿರ್ದೇಶಕ ಪದ್ಮಶ್ರೀ ಪುರಸತ ಡಾ. ಹಾಸನ ರು, ಸ್ಥಳಿಯ ಜನಪದ ಕಲಾವಿದ ಡಾ. ಕೆ.ಸಿ. ನಾಗರಜ್ಜಿ, ತಾಲೂಕು ಕಸಾಪ ಅಧ್ಯಕ್ಷ ಪ್ರಭಾಕರ ಶಿಗ್ಲಿ, ಸ್ವಾಭಿಮಾನಿ ಕರವೇ ಅಧ್ಯಕ್ಷ ನಿತ್ಯಾನಂದ ಕುಂದಾಪುರ ಉಪಸ್ಥಿತರಿರುವರು.
ಕರ್ನಾಟಕ ವೈಭವ ಕಾರ್ಯಕ್ರಮ ಬೆಳಗ್ಗೆ 11ಕ್ಕೆ ಜರುಗಲಿದ್ದು, ಉಪ ರಾಷ್ಟ್ರಪತಿ ಜಗದೀಪ ಧನಕರ್ ಉದ್ಘಾಟಿಸುವರು. ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದಶಿರ್ ಬಿ.ಎಲ್. ಸಂತೋಷ ಆಶಯ ಭಾಷಣ ಮಾಡುವರು.
ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಹಾಗೂ ಕರ್ನಾಟಕ ವೈಭವ ಸ್ವಾಗತ ಸಮಿತಿ ಅಧ್ಯಕ್ಷ ಪ್ರೊ. ಎಸ್.ವಿ. ಹಲಸೆ, ಪ್ರಜ್ಞಾ ಪ್ರವಾಹ ಅಖಿಲ ಭಾರತ ಸಹ ಸಂಯೋಜಕ ರಘುನಂದನ ಉಪಸ್ಥಿತರಿರುವರು.
ಸಮಾರಂಭದ ಅಂಗವಾಗಿ ಫೆ. 7, 8, 9ರಂದು ವಿವಿಧ ಗೋಷ್ಠಿಗಳು ನಡೆಯಲಿವೆ. ಫೆ. 9ರಂದು ಸಂಜೆ 6ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪದ್ಮಶ್ರಿ ಪುರಸತೆ ಮಂಜಮ್ಮ ಜೋಗತಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.