ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಶಾಸಕ ಪ್ರಕಾಶ ಕೋಳಿವಾಡ ಚಾಲನೆ

11-RNR-03
Published on

ರಾಣೆಬೆನ್ನೂರ: ರಾಜ್ಯದ ಮಹಿಳೆಯರ ಸಬಲೀಕರಣ ಹಾಗೂ ಅವರು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ನಗರದ ಬಸ್ ನಿಲ್ದಾಣದಲ್ಲಿ ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರು, ವಿದ್ಯಾರ್ಥಿನಿಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆ ಇದಾಗಿದ್ದು, ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಚುನಾವಣೆ ಸಮಯದಲ್ಲಿ ಹೇಳಿದಂತೆ ಅದನ್ನು ಈಡೇರಿಸಲಾಗಿದೆ. ಮಹಿಳೆಯರು ಕರ್ನಾಟಕದ ಯಾವುದೇ ಮೂಲೆಗೆ ಹೋಗಬಹುದು. ಮಹಿಳೆಯರನ್ನು ಸಮಾನವಾಗಿ ಕಾಣುವ ದೃಷ್ಟಿಯಿಂದ ಈ ಯೋಜನೆ ಜಾರಿಗೆ ಗೊಳಿಸಲಾಗಿದೆ. ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳ ಕಾಲಾವಕಾಶವಿದ್ದು, ಸ್ಮಾರ್ಟ್ ಕಾರ್ಡ್ ಸಿಗುವವರೆಗೂ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಅಥವಾ ಚಾಲನಾ ಲೈಸೆನ್ಸ್ ತೋರಿಸಿ ಪ್ರಯಾಣಿಸಬಹುದಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net