ರನ್ಯಾಗೆ ಜೈಲೇ ಗತಿ! ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ | Ranya Rao

Ranya Rao
Published on

Ranya Rao: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ, ನಟಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಬಾರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆದೇಶವನ್ನು ಮಾ.27ಕ್ಕೆ ಕಾಯ್ದಿರಿಸಿತ್ತು. ಅಂತೆಯೇ ಇಂದು ಆದೇಶ ಪ್ರಕಟಿಸಿದ ಕೋರ್ಟ್​, ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನಟಿಯ ಪರಪ್ಪನ ಅಗ್ರಹಾರ ಜೈಲುವಾಸ ಮುಂದುವರಿಯಲಿದೆ.

ಏನಿದು ಪ್ರಕರಣ?

ಮಾ.03ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್​ ಅವ​ರಿಂದ 14.56 ಕೋಟಿ ರೂ. ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡ ಪೊಲೀಸರು, ಕೆಲವೇ ಕ್ಷಣದಲ್ಲಿ ನಟಿಯನ್ನು ಬಂಧಿಸಿ, ತನಿಖೆಗೆ ಒಳಪಡಿಸಿದರು. ಒಂದೇ ವರ್ಷದಲ್ಲಿ 27 ಬಾರಿ ದುಬೈಗೆ ಭೇಟಿ ನೀಡಿದ್ದ ಚೆಲುವೆ, 14.2 ಕೆಜಿ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಇಷ್ಟೊಂದು ಚಿನ್ನವನ್ನು ಹೇಗೆ ಸಾಗಿಸುತ್ತಿದ್ದರು? ಇಂಥಾ ಕೆಲಸಕ್ಕೆ ‘ಮಾಣಿಕ್ಯ’ ನಟಿ ಕೈಹಾಕಿದ್ದೇಕೆ? ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಸದ್ಯ ಇದಕ್ಕೆ ಉತ್ತರ ಹುಡುಕುತ್ತಿರುವ ಖಾಕಿ ಪಡೆ, ಪಾತ್ರಧಾರಿ ಹಿಂದಿರುವ ಸೂತ್ರಧಾರಿಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net