

Ranya Rao Case: ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡದ ಎಂಬುದು ಕೇವಲ ಊಹಾಪೋಹಗಳು. ಇದು ಬಿಜೆಪಿಯ ಗೇಮ್ ಪ್ಲ್ಯಾನ್ ಎಂದು ಡಿಸಿಎಂ DK ಶಿವಕುಮಾರ್ ಆರೋಪಿದರು.
ವಿಧಾನಸೌಧದ ಆವರಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದರು. ಯಾವ ಸಚಿವರ ಹೆಸರಿದೆ? ಯಾರಾದರೂ ನೋಡಿದ್ದಾರಾ? ಕೇಳಿದ್ದಾರಾ? ನಾವು ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತಿರುತ್ತೇವೆ. ಅಲ್ಲಿ ಅನೇಕರು ನಮ್ಮ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ? ನಮ್ಮ ಜತೆ ಫೋಟೋ ತೆಗೆಸಿಕೊಂಡವರು ಅಪರಾಧ ಮಾಡಿದರೆ ನಾವು ಅದಕ್ಕೆ ಬೆಂಬಲ ನೀಡಿದ್ದೇವೆ ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಇಂತಹ ಸಚಿವರು ಈ ರೀತಿಯಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಇದ್ದರೆ ನೀವು ಚರ್ಚೆ ಮಾಡಿ. ಯಾವುದೇ ಮಂತ್ರಿ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ. ಈ ಪ್ರಕರಣದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಮುಖ್ಯಮಂತ್ರಿಗಳು ಕೂಡ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. ನಾನು ಇತ್ತೀಚೆಗೆ ದುಬೈಗೆ ತೆರಳಿದ್ದೆ. ಆಗ ನನ್ನ ಉಂಗುರ, ಬೆಲ್ಟ್, ವಾಚ್ಗಳನ್ನು ತೆಗೆಸಿದ್ದರು. ಇಂತಹ ಭದ್ರತೆ ಮಧ್ಯೆ 14 ಕೆ.ಜಿ ಚಿನ್ನ ಕಳ್ಳಸಾಗಾಣೆ ಹೇಗೆ ಸಾಧ್ಯ ಎಂದು ನನಗೂ ಅಚ್ಚರಿಯಾಗಿದೆ ಎಂದರು.