ರನ್ಯಾ ರಾವ್​ ಚಿನ್ನ ಕಳ್ಳಸಾಗಣೆ ಪ್ರಕರಣ: ಇಡಿಯಿಂದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು | ED seize

dk - 2025-07-04T221531.120
Published on

ED seize : ನಟಿ ರನ್ಯಾರಾವ್​ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಶುಕ್ರವಾರ ತಿಳಿಸಿದೆ.

ಹರ್ಷವರ್ಧಿನಿ ಅಲಿಯಾಸ್​ ರನ್ಯಾ ರಾವ್​ ಮತ್ತು ಸಹಚರರು ನಡೆಸಿದ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ಮತ್ತು ಅದರ ಆದಾಯವನ್ನು ಅಕ್ರಮವಾಗಿ ವರ್ಗಾಯಿಸುವ ಪ್ರಕರಣದಲ್ಲಿ, ನವದೆಹಲಿಯ ಪ್ರಧಾನ ಕಚೇರಿ ತನಿಖಾ ಘಟಕ-II, ED, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಯ ನಿಬಂಧನೆಗಳ ಅಡಿಯಲ್ಲಿ ಒಟ್ಟು34.12 ಕೋಟಿ ರೂ, ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಸ್ಥಿರ ಆಸ್ತಿಗಳು ಸೇರಿವೆ ಎಂದು ED ಹೇಳಿಕೆಯಲ್ಲಿ ತಿಳಿಸಿದೆ.

ಆರ್ಥಿಕ ಅಪರಾಧ ತನಿಖಾ ಸಂಸ್ಥೆಯು ಇದುವರೆಗೆ ಕಳ್ಳಸಾಗಣೆಯಲ್ಲಿ 55 ಕೋಟಿ ರೂ. ಮೌಲ್ಯದ ಅಪರಾಧದ ಆದಾಯವನ್ನು ಗುರುತಿಸಿದೆ ಎಂದು ತಿಳಿಸಿದೆ.

ಪ್ರಕರಣ ಏನು..?

ಮಾ.3 ರಂದು ದುಬೈನಿಂದ ಬಂದ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅನ್ನು ಚಿನ್ನ ಕಳ್ಳಸಾಗಣಿಕೆ ಆರೋಪದ ಮೇಲೆ ಬಂಧಿಸಲಾಯಿತು. ಅಧಿಕಾರಿಗಳು 12.56 ಕೋಟಿ ರೂ.ಗೂ ಹೆಚ್ಚು ಮೌಲ್ಯದ 14.2 ಕೆಜಿ 24 ಕ್ಯಾರೆಟ್ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net