ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಕೇಸ್; ಮಾಣಿಕ್ಯ, ಪಟಾಕಿ ಚಿತ್ರ ಖ್ಯಾತಿಯ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್​

Ranya Rao
Published on

ಬೆಂಗಳೂರು: ದುಬೈನಿಂದ ಹೆಚ್ಚುವರಿ ಪ್ರಮಾಣದ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿಕ್ಯ ಸಿನಿಮಾ ಖ್ಯಾತಿಯ ನಟಿ ರನ್ಯಾ ರಾವ್ ಅವರನ್ನು ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ರನ್ಯಾ ಅವರನ್ನು ಬಂಧಿಸಿದ್ದ ಡಿಆರ್‌ಐ ಅಧಿಕಾರಿಗಳು ನಗರದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿ ನ್ಯಾಯಾಧೀಶರು ಆರೋಪಿತೆಗೆ ಮಾರ್ಚ್​ 18ರ ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ? 

ದುಬೈನಿಂದ ಹೆಚ್ಚುವರಿ ಪ್ರಮಾಣದ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿಕ್ಯ ಸಿನಿಮಾ ಖ್ಯಾತಿಯ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ನಿನ್ನೆ (ಮಾ.04) ವಶಕ್ಕೆ ಪಡೆದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದಿರುವ ಡಿ.ಆರ್.ಐ ತಂಡ, ವಿಚಾರಣೆಗೆ ಒಳಪಡಿಸಿತ್ತು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ ರನ್ಯಾ ಅವರು ಡಿಐಜಿ ರಾಮಚಂದ್ರ ರಾವ್ 2ನೇ ಪತ್ನಿ ಮೊದಲ ಗಂಡನ ಮಗಳಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ತಂಡ ವಿಮಾನ ನಿಲ್ದಾಣಕ್ಕೆ ಬಂದಿತ್ತು. ನಟಿ ರನ್ಯಾ ಏರ್ಪೋರ್ಟಿಗೆ ಬರುತ್ತಿದ್ದಂತೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಹಾಗೆ ರನ್ಯಾ ರಾವ್ ಅವರು ನಟ ಸುದೀಪ್ ಅಭಿನಯದ ಮಾಣಿಕ್ಯ ಹಾಗೂ ಗಣೇಶ್ ನಟನೆಯ ಪಟಾಕಿ ಸಿನಿಮಾದಲ್ಲಿ ನಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net