

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ಕೊಲೆ, ಲವ್ ಜಿಹಾದ್ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ್ ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರೇ ತಿಂಗಳಿಲ್ಲಿ ಜನವಿರೋಧಿ ಅಲೆ ನಿರ್ಮಾಣವಾಗಿದ್ದು, ಜನರ ಹಿತ, ರಾಜ್ಯದ ಅಭಿವೃದ್ಧಿಯನ್ನು ಸರ್ಕಾರ ಮರೆತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಮಹಿಳೆಯ ಮೇಲಿನ ದೌರ್ಜನ್ಯ ಸಂಬಂಧ ಗೃಹ ಸಚಿವರ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದರೆ, ಇದೆಲ್ಲಾ ನಡೆಯುತ್ತಲೇ ಇರುತ್ತವೆ. ತಡೆಯಲು ಸಾಧ್ಯವಿಲ್ಲ ಎಂಬ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಇದು ಇಂತಹ ದುಷ್ಕೃತ್ಯಗಳನ್ನು ಎಸಗುವವರಿಗೆ ಉತ್ತೇಜನ ನೀಡಿದಂತೆ ಆಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿರುವ ಭ್ರಷ್ಟಾಚಾರಕ್ಕೆ ಜಾತಿ, ಅಹಿಂದ ಹೆಸರಿನಲ್ಲಿ ರಕ್ಷಣೆ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಏನೇ ಮಾಡಿದರೂ ಅವರನ್ನು ಐದು ಜನ ಕೂಗುಮಾರಿಗಳಾದ ಸಂತೋಷ್ ಲಾಡ್, ಡಾ.ಎಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡರು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾದ ಅಧ್ಯಕ್ಷ ಆರ್.ರಘು ಕೌಟಿಲ್ಯ ಮಾತನಾಡಿ, ಸಿದ್ದರಾಮಯ್ಯ ನವರು ಭ್ರಷ್ಟಾಚಾರ ಮಾಡಿ ಅದರಿಂದ ತಪ್ಪಿಸಿಕೊಳ್ಳಲು