ರಣಬೀರ್- ರಶ್ಮಿಕಾ ಮಂದಣ್ಣ ಲಿಪ್‌ಲಾಕ್; ವಿಡಿಯೋ ವೈರಲ್​​​..! ವಿಜಯ್​​​ ಕಾಲೆಳೆದ ನೆಟ್ಟಿಗರು

vijay cry
Published on

ರಣಬೀರ್ ಕಪೂರ್ ಅವರು ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣಾ ನಟಿಸುತ್ತಿದ್ದಾರೆ.

ಚಿತ್ರವನ್ನು ಭದ್ರಕಾಳಿ ಪಿಕ್ಚರ್ಸ್ ಮತ್ತು ಟಿ ಸೀರೀಸ್ ಬ್ಯಾನರ್ ಅಡಿಯಲ್ಲಿ ಭೂಷಣ್ ಕುಮಾರ್ ಮತ್ತು ಪ್ರಣಯ್ ರೆಡ್ಡಿ ವಂಗ ಜಂಟಿಯಾಗಿ ನಿರ್ಮಿಸಿದ್ದಾರೆ. ಈಗಾಗಲೇ ಈ ಸಿನಿಮಾದಿಂದ ಬಿಡುಗಡೆಯಾಗಿರುವ ಪೋಸ್ಟರ್ ಹಾಗೂ ಟೀಸರ್ ಗಳು ಸಿನಿಮಾದ ನಿರೀಕ್ಷೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿವೆ. ಚಿತ್ರವು ಡಿಸೆಂಬರ್ 01 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.


ಹುಡುಗಿಯ ಕುರಿತಾದ ಸುಮಧುರ ಹಾಡನ್ನು ಬುಧವಾರ ಬಿಡುಗಡೆ ಮಾಡಲಿದ್ದೇವೆ ಎಂದು ಚಿತ್ರತಂಡ ಪ್ರಕಟಿಸಿದೆ. ಈ ನಿಟ್ಟಿನಲ್ಲಿ ವಿಶೇಷ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಖಾಸಗಿ ಜೆಟ್‌ನಲ್ಲಿ ರಣಬೀರ್ ಮತ್ತು ರಶ್ಮಿಕಾ ಲಿಪ್ ಲಾಕ್ ಮಾಡುತ್ತಿರುವ ಫೋಟೋವನ್ನು ಸಿನಿಮಾ ತಂಡ ಬಿಡುಗಡೆ ಮಾಡಿದ್ದಾರೆ.


ರಿವೇಂಜ್ ಡ್ರಾಮಾ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನಿಲ್ ಕಪೂರ್ ರಣಬೀರ್ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಬಾಬಿ ಡಿಯೋಲ್ ಮತ್ತು ಹಿರಿಯ ನಟ ಪೃಥ್ವಿ ರಾಜ್ ವಿಲನ್ ಪಾತ್ರಗಳಲ್ಲಿ ನಟಿಸಿದ್ದಾರೆ.

ಡಿಸೆಂಬರ್ 1 ರಂದು ‘ಅನಿಮಲ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಬಗ್ಗೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದರು.


ಗುಣಮಟ್ಟದ ಸಿನಿಮಾವನ್ನು ನೀಡಬೇಕು ಎಂಬ ಕಾರಣಕ್ಕೆ ನಿರ್ದೇಶಕ ಸಂದೀಪ್​​ ರೆಡ್ಡಿ ಹೆಚ್ಚು ಕಾಲಾವಕಾಶ ತೆಗೆದುಕೊಂಡಿದ್ದಾರೆ. ಚಿತ್ರದಲ್ಲಿ ಒಟ್ಟು 7 ಹಾಡುಗಳು ಇವೆ. ಪ್ರತಿ ಭಾಷೆಯ ಹಾಡುಗಳು ಪ್ರತ್ಯೇಕವಾಗಿ ಸಿದ್ಧವಾಗುತ್ತಿವೆ. ಎಲ್ಲವನ್ನೂ ಸೇರಿದರೆ 35 ಹಾಡುಗಳು ಆಗಲಿವೆ.


ಚಿತ್ರದಲ್ಲಿ ರಣಬೀರ್ ಕಪೂರ್, ಅನಿಲ್ ಕಪೂರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್, ಟ್ರಿಪ್ಟಿ ಡಿಮ್ರಿ ನಟಿಸಿದ್ದಾರೆ.ರಶ್ಮಿಕಾ ಮಂದಣ್ಣ ಅವರು ಇಲ್ಲಿಯವರೆಗೂ 18 ಸಿನಿಮಾಗಳನ್ನು ಮಾಡಿದ್ದಾರೆ. ಎಲ್ಲಾ ಸಿನಿಮಾಗಳಲ್ಲಿ ಅವರು ಗ್ಲಾಮರ್ ಆಗಿ ಮಿಂಚಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net