ಮನೆಯಲ್ಲಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ವಶ

03 HANUR FILE 3
ಗೊಲ್ಲರದಿಂಬದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿರುವುದು.
Published on

ಹನೂರು: ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರದಿಂಬ ಗ್ರಾಮದ ಮನೆಯೊಂದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಶನಿವಾರ ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಗ್ರಾಮದ ಗೋವಿಂದರಾಜು (40) ಬಂಧಿತ. ಈತ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಗ್ರಾಮಗಳಲ್ಲಿ ಜನರಿಂದ ಪಡಿತರ ಅಕ್ಕಿಯನ್ನು ಖರೀದಿಸಿ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ದಾಸ್ತಾನು ಮಾಡಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ತಾಲೂಕು ಪ್ರಭಾರ ಆಹಾರ ನಿರೀಕ್ಷಕ ವಿಷ್ಣುಮೂರ್ತಿ ಅವರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರಾಮಾಪುರ ಪೊಲೀಸರಿಗೆ ಮಾಹಿತಿ ತಿಳಿಸಿದರು.

ಬಳಿಕ ವಿಷ್ಣುಮೂರ್ತಿ, ಸಬ್ ಇನ್‌ಸ್ಪೆಕ್ಟರ್ ಲೋಕೇಶ್, ಸಿಬ್ಬಂದಿ ಶಿವರಾಮಯ್ಯ, ಮಹೇಂದ್ರ, ಲಿಯಾಖತ್ ಆಲಿಖಾನ್, ಮಕಂದಾರ್ ಹಾಗೂ ಅಮಗೊಂಡ ಬಿರಾದಾರ್ ತಂಡ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸುವುದು ದೃಢಪಟ್ಟಿತು. 38 ಚೀಲಗಳಿಂದ 1,724 ಕೆಜಿ ಪಡಿತರ ಅಕ್ಕಿ ಹಾಗೂ ಆರೋಪಿಯನ್ನು ವಶಕ್ಕೆ ಪಡೆದ ಆಹಾರ ಇಲಾಖೆಯ ನಿರೀಕ್ಷಕರು ಪ್ರಕರಣವನ್ನು ರಾಮಾಪುರ ಪೋಲಿಸ್ ಠಾಣೆಗೆ ಹಸ್ತಾಂತರಿಸಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net