3 ತಿಂಗಳಲ್ಲಿ ರಾಜ್ಯಾದ್ಯಂತ ಬರೋಬ್ಬರಿ 15.24 ಕೋಟಿ ರೂ. ಕ್ಕಿಂತ ಅಧಿಕ ಮೌಲ್ಯದ ಪಡಿತರ ವಶ - worth over 15.24 crore ration seized

ಕಳೆದ ಮೂರು ತಿಂಗಳಲ್ಲಿ ರಾಜ್ಯಾದ್ಯಂತ ಕಾಳಸಂತೆಯಲ್ಲಿ ಅಕ್ರಮವಾಗಿ ಸಾಗಣೆ, ದಾಸ್ತಾನು ಮತ್ತು ಮಾರಾಟ ಮಾಡುತ್ತಿದ್ದ 15.24 ಕೋಟಿ ರೂ.ಕ್ಕಿಂತ ಅಧಿಕ ಮೌಲ್ಯದ ಪಡಿತರ ಧಾನ್ಯಗಳನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆಹಾರ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆ
ಪಡಿತರ ಅಕ್ಕಿ ಜಪ್ತಿ
Published on: 

ಬೆಂಗಳೂರು: (worth over 15.24 crore ration seized) ಕಳೆದ ಮೂರು ತಿಂಗಳಲ್ಲಿ ರಾಜ್ಯಾದ್ಯಂತ ಕಾಳಸಂತೆಯಲ್ಲಿ ಅಕ್ರಮವಾಗಿ ಸಾಗಣೆ, ದಾಸ್ತಾನು ಮತ್ತು ಮಾರಾಟ ಮಾಡುತ್ತಿದ್ದ 15.24 ಕೋಟಿ ರೂ.ಕ್ಕಿಂತ ಅಧಿಕ ಮೌಲ್ಯದ ಪಡಿತರ ಧಾನ್ಯಗಳನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆ.1ರಿಂದ ನ.10ವರೆಗೆ ಅಧಿಕಾರಿಗಳು ನಿರಂತರವಾಗಿ ವಾಹನಗಳ ತಪಾಸಣೆ ಹಾಗೂ ಖಾಸಗಿ ಗೋಡೌನ್‌ಗಳ ಮೇಲೆ ದಾಳಿ ನಡೆಸಿ ಆಹಾರ ಧಾನ್ಯಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ, ಕೋಲಾರ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಅಧಿಕವಾಗಿ ರೇಷನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಪಡಿತರ ಕಳ್ಳ ಸಾಗಣೆಗೆ ಬಳಸಲಾಗುತ್ತಿದ್ದ 220 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ತಪಾಸಣೆಗೆ ಸಂಬಂಧಿಸಿದಂತೆ 238 ಎ್ಐಆರ್ ದಾಖಲಿಸಿ, 266 ಮಂದಿ ಬಂಧಿಸಲಾಗಿದೆ. ಇದೇ ವೇಳೆ 1,817 ಗ್ಯಾಸ್ ಸಿಲಿಂಡರ್ ಜಪ್ತಿ ಮಾಡಲಾಗಿದೆ.

Also Read
ಟಾಕ್ಸಿಕ್​ ಚಿತ್ರದ ಸೋಲಿನ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಕಿಯಾರಾ: ಯಶ್​ ಜತೆಗಿನ ಇಂಟಿಮೇಟ್ ದೃಶ್ಯದ ಬಗ್ಗೆಯೂ ಓಪನ್​ ಟಾಕ್​! Kiara Advani
ಆಹಾರ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆ

ಕೇಂದ್ರದ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ’ ಮತ್ತು ರಾಜ್ಯದ ‘ಅನ್ನಭಾಗ್ಯ’ಯೋಜನೆಯಡಿ 10,47,080 ಅಂತ್ಯೋದಯ ಮತ್ತು 1,14,38,886 ಬಿಪಿಎಲ್ ಚೀಟಿಗಳಿಗೆ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ 4.70 ಲಕ್ಷ ಮೆಟ್ರಿಕ್ ಟನ್ ಪಡಿತರ ವಿತರಿಸಲಾಗುತ್ತಿದೆ. ಬಿಪಿಎಲ್ ಹೊಂದಿರುವ ಪ್ರತಿ ಸದಸ್ಯನಿಗೆ 2 ಯೋಜನೆಗಳಡಿ ಅಕ್ಕಿ, ರಾಗಿ ಸೇರಿ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ.

ಪ್ರತಿ ಅಂತ್ಯೋದಯ ಕಾರ್ಡ್‌ಗೆ 35 ಕೆಜಿ ಕೊಡಲಾಗುತ್ತಿದೆ. ಆದರೆ, ಕೆಲ ಕಾರ್ಡ್‌ದಾರರು ತಮ್ಮ ಪಾಲಿನ ಅಕ್ಕಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಕಾಳದಂಧೆಕೋರರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ, ಸಾಕಷ್ಟು ಪ್ರಮಾಣದಲ್ಲಿ ಪಡಿತರ ಅಕ್ಕಿ ಕಾಳಸಂತೆಗೆ ಮಾರಾಟವಾಗುತ್ತಿರುವುದು ಇಲಾಖೆಯ ಅಧಿಕಾರಿಗಳು ನಡೆಸಿರುವ ಕಾರ್ಯಾಚರಣೆಯಲ್ಲಿ ಬರೋಬ್ಬರಿ 15.24 ಕೋಟಿ ರೂ.ಕ್ಕಿಂತ ಅಧಿಕ ಮೌಲ್ಯದ ಪಡಿತರ ಧಾನ್ಯಗಳು ಸಿಕ್ಕಿಬಿದ್ದಿರುವುದು ಸಾಕ್ಷಿ. ಹಾಗಾಗಿ, ಅಕ್ರಮ ಜಾಲದಲ್ಲಿ ಭಾಗಿಯಾಗಿರುವ ಖಾಸಗಿ ವ್ಯಕ್ತಿಗಳು ಹಾಗೂ ರೈಸ್ ಮಿಲ್‌ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬಂದಿದೆ.