ರೇವ್ ಪಾರ್ಟಿ; ಸಿಸಿಬಿ ಕಸ್ಟಡಿಗೆ ನಟಿ ತೆಲುಗು ಹೇಮಾ

hema
Published on

ಬೆಂಗಳೂರು: ರೇವ್ ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಗು ನಟಿ ಹೇಮಾ ಅವರನ್ನು 24 ಗಂಟೆ ಕಾಲ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ಆರೋಪದಡಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. ಹೆಚ್ಚಿನ ತನಿಖೆ ಸಲುವಾಗಿ 24 ಗಂಟೆ ಕಸ್ಟಡಿಗೆ ಕೊಡಬೇಕೆಂದು ಸಿಸಿಬಿ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇದಕ್ಕೆ ಕೋರ್ಟ್ ಸಮ್ಮತಿಸಿದೆ.

ಹುಸ್ಕೂರು ಸಮೀಪದ ಗೋಪಾಲ್ ರೆಡ್ಡಿ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಮೇ 19ರಂದು ಸನ್ ರೈಸ್ ಟು ಸನ್ ಸೆಟ್ ಹೆಸರಿನ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 103 ಮಂದಿಯನ್ನು ವಶಕ್ಕೆ ಪಡೆದಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ನಟಿ ಹೇಮಾ, ಸಾಫ್ಟ್‌ವೇರ್ ಇಂಜಿನಿಯರ್‌ಗಳು, ಉದ್ಯಮಿಗಳು ಸೇರಿ 86 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net