ಬೆಂಗಳೂರಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರು

Ravi Pujari 24 Feb 20
Published on

ಬೆಂಗಳೂರು: ಆಫ್ರಿಕಾದ ಸೆನೆಗಲ್​ನಲ್ಲಿ ಬಂಧಿತನಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ನಿನ್ನೆ ರಾತ್ರಿ ಭಾರತಕ್ಕೆ ಕರೆತರಲಾಗಿದೆ.

ಸೆನೆಗಲ್​ನಲ್ಲಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ರವಿ ಪೂಜಾರಿಯನ್ನು ಏರ್​ಫ್ರಾನ್ಸ್​ ಮೂಲಕ ನಿನ್ನೆ ತಡರಾತ್ರಿ ಬೆಂಗಳೂರಿಗೆ ಕರೆತರಲಾಗಿದೆ. ರವಿ ಪೂಜಾರಿಯನ್ನು ಇಂದು ಮಡಿವಾಳದ ಇಂಟರಾಗೇಶನ್​ ಸೆಂಟರ್​ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು. ಹೀಗಾಗಿ ಸೆಂಟರ್​ನ ಸುತ್ತಲೂ ಬಿಗಿ ಭದ್ರತೆ ಒದಗಿಸಲಾಗಿದೆ.

ವೈದ್ಯಕೀಯ ಪರೀಕ್ಷೆ ಬಳಿಕ ಐದನೇ ಎಸಿಎಂಎಂ ನ್ಯಾಯಾಲಯದ ಎದುರು ಆತನನ್ನು ಹಾಜರುಪಡಿಸಲಾಗುವುದು. ಅದಾದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net