ಯಡಿಯೂರಪ್ಪ ಆಪ್ತ ವಲಯದಲ್ಲಿದ್ದ ಮಾಜಿ ಶಾಸಕ ಜೆಡಿಎಸ್​ ಸೇರ್ಪಡೆ!

jds
Published on

ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ರವಿಕಾಂತ ಪಾಟೀಲ್​ ಇಂದು ಜೆಡಿಎಸ್​ ಸೇರಿದ್ದಾರೆ. ಸಿಂದಗಿ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ರವಿಕಾಂತ ಅವರು ಇಂಡಿ ಕ್ಷೇತ್ರದಿಂದ ಪಕ್ಷೇತರನಾಗಿ ಮೂರು ಬಾರಿ ಶಾಸಕರಾಗಿದ್ದರು. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲುಂಡಿದ್ದರು. ನಂತರ ಬಿಜೆಪಿಗೆ ಸೇರಿದ್ದರು. 2018ರಲ್ಲಿ ಇಂಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಬೇಕೆಂಬ ಆಕಾಂಕ್ಷೆ ಹೊಂದಿದ್ದರು. ಆದರೆ ಟಿಕೆಟ್​ ಸಿಕ್ಕಿರಲಿಲ್ಲ. ಅದಾದ ನಂತರ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಿ ಸೋತಿದ್ದರು.

ಜೆಡಿಎಸ್ ಜಿಲ್ಲಾದ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹಾಗೂ ಇತರರ ಸಮ್ಮುಖದಲ್ಲಿ ರವಿಕಾಂತ ಜೆಡಿಎಸ್​ ಸೇರಿದ್ದಾರೆ. ಮುಂಬರುವ ಸಿಂದಗಿ ಉಪ ಚುನಾವಣೆಗೆ ಜೆಡಿಎಸ್​ನಿಂದ ಸ್ಪರ್ದೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net