ಕಠಿಣ ಪರಿಶ್ರಮಕ್ಕೆ ನೀವೇ ಉದಾಹರಣೆ! ಪ್ರಧಾನಿ ಭೇಟಿಯಾದ ಟೀಂ ಇಂಡಿಯಾ ಸ್ಟಾರ್ ಆಲ್​ರೌಂಡರ್

Ravindra Jadeja
Published on

ನವದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಪತ್ನಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಐಪಿಎಲ್ ಟೂರ್ನಿಯ ಬಿಡುವಿನ ವೇಳೆ ಜಡೇಜಾ ಪ್ರಧಾನಿಯನ್ನು ಭೇಟಿಯಾಗಿದ್ದು, ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ನಮ್ಮ ತಾಯ್ನಾಡಿನಲ್ಲಿ ನೀವೊಬ್ಬ ಅತ್ಯುತ್ತಮ ಉದಾಹರಣೆಯಾಗಿದ್ದೀರಿ. ನೀವು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತೀರಿ ಎಂಬುದು ನನಗೆ ಖಾತ್ರಿಯಿದೆ ಎಂದು ಜಡೇಜಾ ಟ್ವೀಟ್ ಮಾಡಿದ್ದಾರೆ.

ಜಡೇಜಾ ಪತ್ನಿ ಬಿಜೆಪಿ ಶಾಸಕಿ!

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರವೀಂದ್ರ ಜಡೇಜಾ ಪತ್ನಿ ಗುಜರಾತ್‌ನ ಜಾಮ್‌ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದರು. ಮೊದಲ ಬಾರಿಯೇ ರಿವಾಬಾ ಜಡೇಜಾ ಭರ್ಜರಿ ಜಯವನ್ನೂ ದಾಖಲಿಸಿಕೊಂಡಿದ್ದರು. ಕಾಂಗ್ರೆಸ್‌ನ ಬಿಪೇಂದ್ರಸಿನ್ಹ್ ಚತುರ್‌ಸಿನ್ಹ್ ಜಡೇಜಾ ವಿರುದ್ಧ 40,963 ಭಾರಿ ಅಂತರದಿಂದ ಜಯಗಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net