ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ರಾಯಣ್ಣ ವಿಶಿಷ್ಟ ಛಾಪು

17.Pyp. 02. (2)
ಪಿರಿಯಾಪಟ್ಟಣ ತಾಲೂಕಿನ ನವಿಲೂರು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಭಕ್ತ ಕನಕದಾಸರ ಪ್ರತಿಮೆಗಳನ್ನು ಉದ್ಘಾಟಿಸಲಾಯಿತು. ರಾಜಶೇಖರ್ ದೊಡ್ಡಣ್ಣ ಮೌರ್ಯ, ರೇಣುಕುಮಾರ್, ಕಿಶೋರ್ ಇತರರು ಇದ್ದರು.
Published on

ಪಿರಿಯಾಪಟ್ಟಣ: ದೇಶದ ಸ್ವಾತಂತ್ರಕ್ಕಾಗಿ ನಡೆದ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಶಿಷ್ಟ ಛಾಪು ಮೂಡಿಸಿದ್ದಾರೆ ಎಂದು ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ ತಿಳಿಸಿದರು.

ತಾಲೂಕಿನ ನವಿಲೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗಳನ್ನು ಉದ್ಘಾಟಿಸಿ ಮಾತನಾಡಿ, ಭಕ್ತ ಕನಕದಾಸರು ತಮ್ಮ ಕೀರ್ತನೆಗಳಿಂದ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರು ನ್ಯಾಯಯುತವಾದ ಹೋರಾಟದ ಮೂಲಕ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಪ್ರತಿಪಾದಿಸುವುದನ್ನು ಕಲಿಸಿದ್ದಾರೆ ಎಂದರು.

ಪ್ರತಿಯೊಂದು ಧರ್ಮವನ್ನೂ ಗೌರವದಿಂದ ಕಾಣಬೇಕು ಎಂಬ ಅಭಿಲಾಷೆಯೊಂದಿಗೆ ಶಾಂತಿಯುತ ಸಮಾಜದ ನಿರ್ಮಾಣದಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ ಎಂದರು. ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿನ 50ಕ್ಕೂ ಹೆಚ್ಚು ಕಡೆ ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸಲು ವೈಯಕ್ತಿಕವಾಗಿ ಹಣ ನೀಡಿದ್ದೇನೆ. ಅವರ ಆದರ್ಶ ಗುಣಗಳು ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ವೇದಿಕೆ ತಾಲೂಕು ಅಧ್ಯಕ್ಷ ರೇಣುಕುಮಾರ್, ಮುಖಂಡರಾದ ಕಿಶೋರ್, ಶಿವಪ್ಪ, ಲಿಂಗರಾಜು, ರಾಜೇಗೌಡ , ಸ್ವಾಮಿಗೌಡ, ಶಿವರಾಜು, ಶಿವಣ್ಣ , ಮಂಜು, ಗಿರೀಶ್, ರಾಜು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net