

IPL-2025 | ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 52 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ ಸೆಣೆಸಾಟ ನಡೆಸಿದವು. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿದ್ದು ಚೆನ್ನೈಗೆ 214 ರನ್ ಗಳ ಟಾರ್ಗೆಟ್ ನೀಡಿತ್ತು. ಆರ್ ಸಿಬಿ ನೀಡಿದ 214 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಪೇರಿಸಿದ್ದು 2 ರನ್ ಗಳಿಂದ ಆರ್ ಸಿಬಿಗೆ ಶರಣಾಯಿತು.