ವಾಣಿಜ್ಯ ಮಳಿಗೆಗಳ ಮರು ಹರಾಜು

IMG-20231206-WA0213
ಸಾಲಿಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಬುಧವಾರ ನಡೆಯಿತು.
Published on

ಸಾಲಿಗ್ರಾಮ: ಗ್ರಾಮ ಪಂಚಾಯಿತಿ ವಾಣಿಜ್ಯ ಮಳಿಗೆಗಳ ಮರು ಹರಾಜು ಪ್ರಕ್ರಿಯೆ ಬುಧವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಆವರಣದಲ್ಲಿ ನಡೆಯಿತು.

ಹಲವು ವರ್ಷಗಳಿಂದ ಗ್ರಾಮ ಪಂಚಾಯಿತಿ ವಾಣಿಜ್ಯ ಮಳಿಗೆಗಳನ್ನು ಮರು ಹರಾಜು ಮಾಡದೆ ಇರುವುದರಿಂದ ಗ್ರಾಮ ಪಂಚಾಯಿತಿಗೆ ಆದಾಯದ ಮೂಲ ಕಡಿಮೆಯಾಗಿತ್ತು. ಆ ಉದ್ದೇಶದಿಂದ ಆಡಳಿತ ಮಂಡಳಿ ಸದಸ್ಯರು ಮತ್ತು ಅಭಿವೃದ್ಧಿ ಅಧಿಕಾರಿ ಸಭೆ ನಡೆಸಿ ಸರ್ವಾನುಮತದಿಂದ ತೀರ್ಮಾನ ಕೈಗೊಂಡು 13 ವಾಣಿಜ್ಯ ಮಳಿಗೆಗಳನ್ನು ಹರಾಜು ಮಾಡುವ ತೀರ್ಮಾನವನ್ನು ಕೈಗೊಂಡಿದ್ದರು.

ಹಾಗಾಗಿ ಬುಧವಾರ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಮಳಿಗೆಗಳ ಮರು ಹರಾಜು ಪ್ರಕ್ರಿಯೆಯಲ್ಲಿ 10 ಮಳಿಗೆಗಳನ್ನು ಬಾಡಿಗೆದಾರರು ಪಡೆದರೆ 3 ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಮುಂದೂಡಲಾಯಿತು. ಹರಾಜಿನಲ್ಲಿ 35ಕ್ಕೂ ಹೆಚ್ಚು ಬಿಡ್ಡುದಾರರು ಭಾಗವಹಿಸಿದ್ದರು.

ಒಂದು ವರ್ಷದ ಮುಂಗಡ ಬಾಡಿಗೆ ಕಟ್ಟಿ ಮಳಿಗೆಗಳನ್ನು ಪ್ರಾರಂಭಿಸಬೇಕು ಎಂದು ಸಾಲಿಗ್ರಾಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಬಾಡಿಗೆದಾರರಿಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ, ಮಾಜಿ ಉಪಾಧ್ಯಕ್ಷೆ ಸುಧಾ ರೇವಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಆರ್.ಪ್ರಕಾಶ್, ದೇವಿಕಾ, ಸದಸ್ಯರಾದ ಹರೀಶ್, ಲೋಕೇಶ್, ಶಕೀಲ್, ರತ್ನಮ್ಮ, ನೀಲಮ್ಮ, ಮಂಜುಳಾ, ನಾಗಮಣಿ, ಗಂಗಾಧರ್, ಕಾರ್ಯದರ್ಶಿ ರವಿ ಸ್ವಾಮಿ, ಸಿಬ್ಬಂದಿ ಅಭಿ, ಅಕ್ಷಯ್, ಮಧು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net