ಪಿಎಸ್​ಐ ನೇಮಕಾತಿಗಾಗಿ ಶೀಘ್ರದಲ್ಲೇ ಮರುಪರೀಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ..

PSI
Published on

ಬೆಂಗಳೂರು: ರದ್ದು ಪಡಿಸಲಾಗಿರುವ ಪಿಎಸ್​ಐ ನೇಮಕಾತಿಗಾಗಿ ಮರುಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ ಈ ಕುರಿತು ಸಚಿವರು ಭರವಸೆ ನೀಡಿದ್ದು, ಮರುಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರುಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಹೇಳಿದರು.

ರದ್ದಾಗಿರುವ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲ 56,000 ಅಭ್ಯರ್ಥಿಗಳು ಮರುಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು. ಮರುಪರೀಕ್ಷೆ ನಡೆಸುವುದು ತಡವಾದರೆ ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರಿಸಿ ಎಂದು ಕೂಡ ಸಚಿವರು ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net