

ಬೆಂಗಳೂರು: ಹತ್ತು ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಪೊಲೀಸರಿಂದ ಮರುತನಿಖೆಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಮರುತನಿಖೆ ಆದೇಶವನ್ನು ಪ್ರಶ್ನಿಸಿ ಆರೋಪಿ ಮುರಳೀಧರ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ.
ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಸುಪ್ರೀಂಕೋರ್ಟ್ ದೇವೇಂದ್ರ ನಾಥ್ ಸಿಂಗ್ ವರ್ಸಸ್ ಸ್ಟೇಟ್ ಆ್ ಬಿಹಾರ್ ಪ್ರಕರಣದಲ್ಲಿ ತನಿಖಾಧಿಕಾರಿ ಪ್ರಕರಣದಲ್ಲಿ ಸರಿಯಾಗಿ ತನಿಖೆ ಮಾಡಿಲ್ಲ ಎಂದಾದರೆ ಅಂತಹ ಸಂದರ್ಭದಲ್ಲಿ ವೈದ್ಯಕೀಯ ದಾಖಲೆ ಸಂಗ್ರಹಿಸಲು, ಗಾಯಗೊಂಡಿದ್ದ ಸಂತ್ರಸ್ತರಿಗೆ ಚಿಕಿತ್ಸೆ ನೀಡಿದ್ದ ವೈದ್ಯರ ಹಾಗೂ ಸಂತ್ರಸ್ತರ ಹೇಳಿಕೆ ಪಡೆಯಲು ಅವಕಾಶ ಕೋರಬಹುದು. ಅದರಂತೆ ಈ ಪ್ರಕರಣದಲ್ಲೂ ಸಹ ಮರು ತನಿಖೆಗೆ ಅವಕಾಶ ಕೋರಿದ್ದು, ಅನುಮತಿ ನೀಡಬೇಕಾದ ಅಗತ್ಯತೆ ಇದೆ ಎಂದು ಆದೇಶಿಸಿದೆ.
ಅಲ್ಲದೆ, ಸ್ವತಂತ್ರವಾಗಿ ಮತ್ತೆ ಪ್ರಕರಣದ ಬಗ್ಗೆ ತನಿಖೆ ನಡೆಸಿ ಸಿಆರ್‌ಪಿ ಸಿ ಸೆಕ್ಷನ್ ೧೭೩(೮)ರಂತೆ ಹೆಚ್ಚುವರಿ ಆರೋಪಪಟ್ಟಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಬೇಕು ಎಂದು ತನಿಖಾಧಿಕಾರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಎ್ಐಆರ್ ದಾಖಲಾಗಿ ೯ ವರ್ಷಗಳ ಬಳಿಕ ತಡವಾಗಿ ಸಲ್ಲಿಸಿರುವ ಅರ್ಜಿ ಪರಿಗಣಿಸಿ ಮತ್ತೆ ತನಿಖೆಗೆ ವಿಚಾರಣಾ ನ್ಯಾಯಾಲಯ ಅವಕಾಶ ನೀಡಿರುವುದು ಸರಿಯಲ್ಲ, ಹಾಗಾಗಿ ಆ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.