ವಿಧಾನಸೌಧ ಮುಂಭಾಗ ‘ಸಂವಿಧಾನ ಪೀಠಿಕೆ ಓದು’ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Constitution Book
Published on

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಶುಕ್ರವಾರ ಬೆಳಗ್ಗೆ 10ಕ್ಕೆ ‘ಸಂವಿಧಾನ ಪೀಠಿಕ ಓದು’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭಾಗವಹಿಸಲಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು 5 ಸಾವಿರ ಜನ ಸೇರಲಿದ್ದಾರೆ.

ಈ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ 2.27 ಕೋಟಿ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಸಚಿವಾಲಯದ ವರೆಗಿನ ಎಲ್ಲ ಕಚೇರಿಗಳಲ್ಲಿ ಸಂವಿಧಾನ ಪೀಠಿಕ ಓದು ನಡೆಯಲಿದೆ. ಸಂಘ-ಸಂಸ್ಥೆಗಳು, ಕಂಪನಿಗಳು, ಬಹುರಾಷ್ಟ್ರೀಯ ಕಂಪನಿಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಕೂಡ ನೋಂದಣಿ ಮಾಡಿಕೊಂಡಿದ್ದು, ಅವರೆಲ್ಲ ತಾವಿರುವ ಸ್ಥಳದಲ್ಲೇ ಸಂವಿಧಾನ ಪೀಠಿಕೆ ಓದಲಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸಾರ್ವಜನಿಕರು ಸಹ ತಾವಿರುವ ಸ್ಥಳದಲ್ಲೇ ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net